Advertisement

ಪಿಯು ಪರೀಕ್ಷೆ ಪೂರ್ವ ಸಿದ್ಧತಾ ಸಭೆ

05:38 PM Jun 17, 2020 | Naveen |

ಹರಪನಹಳ್ಳಿ: ಪಟ್ಟಣದ ಮಿನಿವಿಧಾನಸೌಧದಲ್ಲಿ ತಹಶೀಲ್ದಾರ್‌ ಡಾ| ನಾಗವೇಣಿ ಅಧ್ಯಕ್ಷತೆಯಲ್ಲಿ ದ್ವಿತೀಯ ಪಿಯುಸಿ ಇಂಗ್ಲಿಷ್‌ ಪರೀಕ್ಷೆ ಜೂ. 18ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಪೂರ್ವ ಸಿದ್ಧತಾ ಸಭೆ ನಡೆಯಿತು.

Advertisement

ಪಿಯುಸಿಯ ಎಲ್ಲ ವಿದ್ಯಾರ್ಥಿಗಳು ಜೂ. 18ರಂದು ಬೆಳಗ್ಗೆ 8.30ರೊಳಗೆ ಪರೀಕ್ಷಾ ಕೇಂದ್ರದಲ್ಲಿ ಹಾಜರಾಗಬೇಕು. ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸ್ಯಾನಿಟೈಸರ್‌ ಮಾಡುವಂತೆ ಮುಖ್ಯಾಧಿಕಾರಿ ಹಾಗೂ ತಾಪಂ ಇಒಗೆ ತಿಳಿಸಲಾಯಿತು. ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಥರ್ಮಲ್‌ ಸ್ಕ್ಯಾನ್‌ ಮಾಡಲು ಸಿಬ್ಬಂದಿ ನಿಯೋಜಿಸಲು ತಾಲೂಕು ಆರೋಗ್ಯಾಧಿಕಾರಿ ಅವರಿಗೆ ಸೂಚಿಸಲಾಯಿತು. ಪರೀಕ್ಷಾ ಕೇಂದ್ರಕ್ಕೆ ಹೊರಡುವ ಎಲ್ಲ ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್  ಧರಿಸಬೇಕು. ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಸ್ಯಾನಿಟೈಸರ್‌ ನಿರ್ವಹಿಸಲು ಸೂಚಿಸಲಾಗಿದ್ದು, ಪರೀಕ್ಷಾ ವಿದ್ಯಾರ್ಥಿಗಳಿಗೆ ಬಸ್‌ ವ್ಯವಸ್ಥೆಗೆ ಕಲ್ಪಿಸುವಂತೆ ಬಸ್‌ ಡಿಪೋ ವ್ಯವಸ್ಥಾಪಕರಿಗೆ ನಿರ್ದೇಶನ ನೀಡಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next