ಹರಪನಹಳ್ಳಿ: ಉದ್ಯೋಗ ಖಾತ್ರಿ ಕೂಲಿ ಕೆಲಸದಲ್ಲಿ ತೊಡಗಿದ್ದ ಕಾರ್ಮಿಕನೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ತಾಲೂಕಿನ ಮುತ್ತಿಗಿ ಗ್ರಾಮದ ಸಮೀಪ ಜಮೀನೊಂದರಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.
ಮುತ್ತಿಗಿ ಗ್ರಾಮದ ಎಂ.ಬಸವರಾಜ(35) ಮೃತ ವ್ಯಕ್ತಿ. ಎಂದಿನಂತೆ ಶುಕ್ರವಾರ ಬೆಳಗ್ಗೆ ಉದ್ಯೋಗ ಖಾತ್ರಿ ಯೋಜನೆಯಡಿ ಜಮೀನೊಂದರಲ್ಲಿ ಬದು ನಿರ್ಮಾಣ ಕೆಲಸದಲ್ಲಿ ತೊಡಗಿಕೊಂಡಿದ್ದ ವೇಳೆ ಇದ್ದಕ್ಕಿದಂತೆ ಎದೆನೊವು ಕಾಣಿಸಿಕೊಂಡಿದೆ, ತೀವ್ರ ಅಸ್ವಸ್ಥರಾಗಿ ನೆಲಕ್ಕೆ ಉರಳಿದ್ದಾರೆ. ಅಕ್ಕಪಕ್ಕದಲ್ಲಿದ್ದವರು ಕೂಡಲೇ ಅವರನ್ನು ಮೇಲೆತ್ತಿ ಆಟೋ ಮೂಲಕ ಹರಪನಹಳ್ಳಿ ಸಾರ್ವಜನಿಕ ಆಸ್ಪತ್ರೆಗೆ ಕರೆದ್ಯೊಯ್ದು ಚಿಕಿತ್ಸೆ ಕೊಡಿಸಿದರೂ ಕೊನೆಯುಸಿರೆಳೆದಿದ್ದಾರೆ. ಮೃತರಿಗೆ ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.
ಈ ಕುರಿತಂತೆ ಚಿಗಟೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.