ಹರಪನಹಳ್ಳಿ: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹಾವು ಕಚ್ಚಿ ವ್ಯಕ್ತಿಯೊರ್ವ ಸಾವನ್ನಪ್ಪಿರುವ ಘಟನೆ ತಾಲೂಕಿನ ವ್ಯಾಸನತಾಂಡ ಗ್ರಾಮದಲ್ಲಿ ಮಂಗವಾರ ನಡೆದಿದೆ.
ಗಂಗನಾಯ್ಕ್ (32) ಮೃತ ದುರ್ದೈವಿ ಎಂದು ತಿಳಿದುಬಂದಿದೆ.
ಗಂಗನಾಯ್ಕ್ ಎಂದಿನಂತೆ ಬೆಳಿಗ್ಗೆ ಜಮೀನಿಗೆ ತೆರಳಿ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದಾರೆ. ಆ ಸಂದರ್ಭದಲ್ಲಿ ವಿಷಪೂರಿತ ಹಾವು ಕಚ್ಚಿದೆ. ಕೂಡಲೇ ಸಂಬಂಧಿಕರು ಹರಪನಹಳ್ಳಿ ಸಾರ್ವಜನಿಕ ಆಸ್ಪತ್ರೆಗೆ ಕರೆದ್ಯೊಯ್ದು ಚಿಕಿತ್ಸೆ ಕೊಡಿಸಿದ್ದಾರೆ. ನಂತರ ಹೆಚ್ಚಿನ ಚಿಕಿತ್ಸೆಗೆ ದಾವಣಗೆರೆಯ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಗಂಗನಾಯ್ಕ್ ಮೃತಪಟ್ಟಿದ್ದಾರೆ.
ಇದನ್ನೂ ಓದಿ: ಪ್ರತೀಕಾರ: ಕಣಿವೆ ಪ್ರದೇಶದಲ್ಲಿ ಮುಂದುವರಿದ ಬೇಟೆ, JEMನ ನಾಲ್ವರು ಉಗ್ರರ ಸಾವು
Related Articles
ಕುಟುಂಬಕ್ಕೆ ಅಸರೆಯಾಗಿದ್ದ ಗಂಗನಾಯ್ಕ್ ಕೆಲ ವರ್ಷಗಳ ಹಿಂದೆ ಮದುವೆಯಾಗಿದ್ದು, ಇಬ್ಬರು ಮಕ್ಕಳನ್ನು ಹೊಂದಿದ್ದರು. ಮೃತನ ಕುಟುಂಬಕ್ಕೆ ಸಕಾ೯ರ ಪರಿಹಾರ ನೀಡಬೇಕೆಂದು ಸಂಬಂಧಿಕರು ಮನವಿ ಮಾಡಿದ್ದಾರೆ.
ಹಲುವಾಗಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.