Advertisement

ಲೈಂಗಿಕ ಕಿರುಕುಳ ಕೇಸ್: ತಲೆಮರೆಸಿಕೊಂಡಿದ್ದ ನ್ಯಾಯವಾದಿ ರಾಜೇಶ್ ಕೋರ್ಟ್ ಗೆ ಶರಣು

03:48 PM Dec 20, 2021 | Team Udayavani |

ಮಂಗಳೂರು : ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿ, ಪ್ರಕರಣ ದಾಖಲಾದ ಬಳಿಕ ತಲೆಮರೆಸಿಕೊಂಡಿದ್ದ ಮಂಗಳೂರಿನ ಲೋಕಾಯುಕ್ತ ವಿಭಾಗದ ವಿಶೇಷ ಸರಕಾರಿ ಅಭಿಯೋಜಕರಾಗಿದ್ದ ಕೆ.ಎಸ್.ಎನ್ ರಾಜೇಶ್ ಸೋಮವಾರ, ಡಿ. 20 ರಂದು 3 ನೇ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಶರಣಾಗಿದ್ದಾನೆ.

Advertisement

ಅತ್ಯಾಚಾರಕ್ಕೆ ಯತ್ನಿಸಿದ್ದಾರೆ ಎಂದು ಆರೋಪಿಸಿ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು, ರಾಜೇಶ್ ಪತ್ತೆಗಾಗಿ ಪೊಲೀಸರು ಲುಕ್ ಔಟ್ ನೋಟಿಸ್ ಹೊರಡಿಸಿದ್ದರು. ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು. ಆರೋಪಿ ದೇಶ ಬಿಟ್ಟು ಹೋಗದಂತೆಯೂ ಎಚ್ಚರ ವಹಿಸಲಾಗಿತ್ತು.

ವಿದ್ಯಾರ್ಥಿನಿ ಅ.18 ರಂದು ಪೊಲೀಸರಿಗೆ ದೂರು ನೀಡಿದ್ದುಆರೋಪಿಯನ್ನು ಬಂಧಿಸುವುದು ಪೊಲೀಸರಿಂದ ಇದುವರೆಗೂ ಸಾಧ್ಯವಾಗಿರಲಿಲ್ಲ.ಎರಡು ತಿಂಗಳುಗಳಿಂದ ತಲೆಮರೆಸಿಕೊಂಡಿದ್ದ ಈತನಿಗೆ ನಿರೀಕ್ಷಣಾ ಜಾಮೀನು ದೊರೆತಿರಲಿಲ್ಲ.

ವಿದ್ಯಾರ್ಥಿನಿ ಕಳೆದ ಆ.8 ರಂದು ಕೆ.ಎಸ್.ಎನ್ ರಾಜೇಶ್ ಅವರ ಕರಂಗಲ್ಪಾಡಿಯ ಕಚೇರಿಯಲ್ಲಿ ತರಬೇತಿಗಾಗಿ ಸೇರಿದ್ದರು. ಆಗ ರಾಜೇಶ್ ಯುವತಿಯನ್ನು ಪುಸಲಾಯಿಸಿ ಲೈಂಗಿಕವಾಗಿ ಬಳಸಿಕೊಳ್ಳಲು ಒತ್ತಾಯಿಸುತ್ತಿದ್ದ. ಸೆ.25 ರಂದು ಚೇಂಬರ್ ಒಳಗೆ ಕರೆದು ಅಸಭ್ಯವಾಗಿ ವರ್ತಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next