Advertisement

Puttur ಬಸ್‌ನಲ್ಲಿ ಬಾಲಕಿಗೆ ಕಿರುಕುಳ: ಆರೋಪಿ ಸೆರೆ

09:22 PM Oct 28, 2023 | Team Udayavani |

ಪುತ್ತೂರು : ಮಂಗಳೂರಿನಿಂದ ಪುತ್ತೂರಿಗೆ ಸಂಚರಿಸುತಿದ್ದ ಕೆಎಸ್ಸಾರ್ಟಿಸಿ ಬಸ್‌ನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಮಂಗಳೂರಿನ ಉದಯ (40) ನನ್ನು ಪುತ್ತೂರು ಮಹಿಳಾ ಠಾಣೆ ಪೊಲೀಸರು ಬಂಧಿಸಿ ಪೋಕ್ಸೋ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

ಕಿರುಕುಳ ನೀಡಿದ ವಿಚಾರವನ್ನು ಬಾಲಕಿ ಬಸ್‌ನಲ್ಲಿದ್ದ ಸಹ ಪ್ರಯಾಣಿಕರಿಗೆ ತಿಳಿಸಿದ್ದು, ಪ್ರಯಾಣಿಕರು ಆತನನ್ನು ಇಳಿಯಲು ಬಿಡದೆ ತಡೆದಿದ್ದರು. ಬಳಿಕ ಬಸ್‌ ಅನ್ನು ಪೊಲೀಸ್‌ ಠಾಣೆಯ ಬಳಿ ನಿಲ್ಲಿಸಲಾಯಿತು. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ.

ಘಟನೆಯ ಸುದ್ದಿ ಹರಡುತ್ತಿದ್ದಂತೆ ಕೆಲವು ಯುವಕರು ಮಹಿಳಾ ಪೊಲೀಸ್‌ ಠಾಣೆಯ ಮುಂದೆ ಜಯಾಯಿಸಿ, ಆರೋಪಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದರು

Advertisement

Udayavani is now on Telegram. Click here to join our channel and stay updated with the latest news.

Next