ಬೆಂಗಳೂರು: ಆಸ್ಪತ್ರೆಯ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ, ರೋಗಿಗಳೊಂದಿಗೆ ದುರ್ನಡತೆ, ಸಹ ವೈದ್ಯರು ಹಾಗೂ ಸಿಬ್ಬಂದಿ ಜತೆ ಅನುಚಿತವಾಗಿ ವರ್ತಿಸುತ್ತಿದ್ದ ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ರಾಬರ್ಟ್ ರೆಬೆಲ್ಲೋ ಅವರನ್ನು ಸರ್ಕಾರಿ ಸೇವೆಯಿಂದ ಅಮಾನತುಗೊಳಿಸಿ ಆರೋಗ್ಯ ಇಲಾಖೆಯ ಆಯುಕ್ತ ಡಾ.ರಂ ದೀಪ್ ಆದೇಶ ಹೊರಡಿಸಿದ್ದಾರೆ.
ಉಡುಪಿ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿಗಳು ತನಿಖೆ ಮಾಡಿ ಸಲ್ಲಿಸಿದ ವರದಿಯಲ್ಲಿ ಡಾ. ರಾಬರ್ಟ್ ರೆಬೆಲ್ಲೋ ಅವರು ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ಬಗ್ಗೆ ಸಮೀಪದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಇನ್ನೂ ಆಸ್ಪತ್ರೆಯ ಮೇಲುಸ್ತುವಾರಿ ವಿಫಲತೆ, ಕರ್ತವ್ಯ ಲೋಪ, ದುರ್ನಡತೆಯಂತಹ ಗಂಭೀರ ವಾದ ಆರೋಪಗಳಿವೆ. ಇಂತಹ ಆರೋಪ ಗಳು ಸರ್ಕಾರಿ ನೌಕರರಿಗೆ ತಕ್ಕ ದಲ್ಲ. ಜತೆಗೆ ಆಸ್ಪತ್ರೆ ಸಿಬ್ಬಂದಿ ಸಾಕ್ಷಿ ಹೇಳಲು ಹಿಂದೇಟು ಹಾಕುತ್ತಾರೆಂಬ ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ವರದಿ ಸಲ್ಲಿಕೆ ಮಾಡಿದ್ದಾರೆ.
ಈ ಹಿನ್ನೆಲೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಶಿಸ್ತು ಕ್ರಮ ಬಾಕಿಯಿರಿಸಿ ಸೇವೆಯಿಂದ ಅಮಾನತುಗೊಳಿಸಲಾಗಿದೆ. ಈ ಅವಧಿಯಲ್ಲಿ ಜೀವನಾಂಶ ಭತ್ಯೆ ಪಡೆ ಯುವ ಸಲುವಾಗಿ ಮೂಡಿಗೆರೆ ಇಎನ್‌ಟಿ ತಜ್ಞರ ಹುದ್ದೆಗೆ ಸ್ಥಳಾಂತರಿಸಲಾಗಿದೆ.