ನ್ಯಾಯಾಲಯವು 5 ವರ್ಷ ಶಿಕ್ಷೆ ಹಾಗೂ ದಂಡ ವಿಧಿಸಿ ಸೋಮವಾರ ಆದೇಶ ಹೊರಡಿಸಿದೆ.
Advertisement
ಇಲ್ಲಿನ ಶೀಲವಂತರ ಓಣಿಯ ಮಾಬೂಲಿ ಶೇಖ್ ಶಿಕ್ಷೆಗೆ ಗುರಿಯಾದವ. ಈತ ಈ ಪ್ರದೇಶದ ಅಪ್ರಾಪೆ¤ಯನ್ನು 2019ರ ಮಾ.27ರಂದು ಪುಸಲಾಯಿಸಿ ಲೈಂಗಿಕ ದೌರ್ಜನ್ಯ ಎಸಗಿದ ಬಗ್ಗೆ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಕುರಿತು ತನಿಖೆಮಾಡಿದ್ದ ಪೊಲೀಸರು, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ಮಾಡಿದ 2ನೇ ವಿಶೇಷ ಜಿಲ್ಲಾ ಹಾಗೂ ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶರಾದ ಪಂಚಾಕ್ಷರಿ ಅವರು, ಮಾಬೂಲಿ ಶೇಖ್ ಮೇಲಿದ್ದ ಆರೋಪ ಸಾಬೀತಾದ ಕಾರಣ ಪೋಕ್ಸೋ ಕಾಯ್ದೆಯಡಿ 5 ವರ್ಷ ಶಿಕ್ಷೆ, 4 ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.