Advertisement

3 ಹೆಣ್ಣು ಹೆತ್ತಿದ್ದಕ್ಕೆ ಕಿರುಕುಳ : ಮಕ್ಕಳೊಂದಿಗೆ ಬಾವಿಗೆ ಜಿಗಿದು ಮಹಿಳೆ ಆತ್ಮಹತ್ಯೆ

04:14 PM Oct 24, 2021 | Team Udayavani |

ಕಲಬುರಗಿ : ಮೂರು ಬಾರಿಯೂ ಹೆಣ್ಣು ಮಕ್ಕಳನ್ನು ಹೆತ್ತಿದ್ದಕ್ಕೆ ಗಂಡನ ಮನೆಯವರು ನೀಡುತ್ತಿದ್ದ ಕಿರುಕುಳ ತಾಳಲಾರದೆ ಮಹಿಳೆಯೊಬ್ಬಳು ಮೂರು ಹೆಣ್ಣು ಮಕ್ಕಳೊಂದಿಗೆ ಬಾವಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಆಳಂದ ತಾಲೂಕಿನ ಮಾಡ್ಯಾಳ ಗ್ರಾಮದಲ್ಲಿ ಭಾನುವಾರ ನಡೆದಿದೆ.

Advertisement

ತಾಯಿ ಮತ್ತು ಇಬ್ಬರು ಮಕ್ಕಳು ಸಾವನ್ನಪ್ಪಿದ್ದು, ಒಂದು ಮಗುವನ್ನು ರಕ್ಷಿಸಲಾಗಿದೆ ಎಂದು ತಿಳಿದು ಬಂದಿದೆ.

ಮೃತ ದುರ್ದೈವಿಗಳು, ತಾಯಿ ಲಕ್ಷ್ಮಿ ಏಳಕೆ (28),‌ ಮಕ್ಕಳಾದ ಗೌರಮ್ಮ (6), ಸಾವಿತ್ರಿ (1) ಎನ್ನುವವರಾಗಿದ್ದಾರೆ. ಇನ್ನೋರ್ವ ಬಾಲಕಿ ಈಶ್ವರಿ (4)ಯನ್ನು ಸ್ಥಳಿಯರು ರಕ್ಷಣೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಮೂರು ಜನ ಹೆಣ್ಣು ಮಕ್ಕಳಿರುವ ಕಾರಣಕ್ಕೆ ಗಂಡ, ಗಂಡನ ಮನೆಯವರು ನಿರಂತರವಾಗಿ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದ್ದು, ಕಿರುಕುಳದಿಂದ ಬೇಸತ್ತು ಗ್ರಾಮದ ಹೊರವಲಯದ ಜಮೀನಿನೊಂದರ ಬಾವಿಯಲ್ಲಿ ಸಾವಿಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ.

ನಿಂಬರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಭೇಟಿ ನೀಡಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next