Advertisement

ಧಾರವಾಡ :ತಿಂಡಿ ಆಸೆ ತೋರಿಸಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ :ತಡವಾಗಿ ಬೆಳಕಿಗೆ ಬಂದ ಪ್ರಕರಣ

03:36 PM Sep 22, 2021 | Team Udayavani |

ಧಾರವಾಡ : ತಿಂಡಿ-ತಿನಿಸು, ಹಣದ ಆಸೆಗೆ ಬಲಿಯಾದ ಕಮಲಾಪೂರದ 14 ವರ್ಷ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಈ ಕುರಿತಂತೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ಅಧಿಕೃತವಾಗಿ ಉಪನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

Advertisement

ಪೊಲೀಸ್ ಇಲಾಖೆಯಿಂದ 14 ವರ್ಷದ ಬಾಲಕಿ ಭಿಕ್ಷಾಟನೆ ತೊಡಗಿರುವ ಬಗ್ಗೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ಬಂದಿತ್ತು. ಇದಲ್ಲದೇ ಬಾಲಕಿಯನ್ನು ದುರ್ಬಳಕೆ ಮಾಡುತ್ತಿದ್ದ ಯುವಕನೊಬ್ಬನ್ನು ಸಾರ್ವಜನಿಕರು ಥಳಿಸಿರುವ ಘಟನೆ ಬಗ್ಗೆಯೂ ಮಕ್ಕಳ ಸಹಾಯವಾಣಿಗೆ ದೂರು ಬಂದಿತ್ತು. ಈ ಮಾಹಿತಿ ಆಧರಿಸಿ ಬಾಲಕಿಯನ್ನು ಹುಡುಕಿ, ನವನಗರದ ಸ್ನೇಹಾ ತೆರೆದ ತಂಗುದಾಣದಲ್ಲಿ ಪತ್ತೆಹಚ್ಚಲಾಗಿತ್ತು. ಇದಾದ ಬಳಿಕ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ರಾಜೇಶ್ವರಿ ಸಾಲಗಟ್ಟಿ ನೇತೃತ್ವದಲ್ಲಿ ಬಾಲಕಿಯೊಂದಿಗೆ ಆಪ್ತ ಸಮಾಲೋಚನೆ ಕೈಗೊಂಡಾಗ, ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು ಬೆಳಕಿಗೆ ಬಂದಿದೆ.

ಇದನ್ನೂ ಓದಿ :IPL : ಹೈದ್ರಾಬಾದ್ ಆಟಗಾರನಿಗೆ ಕೋವಿಡ್ ದೃಢ : 6 ಮಂದಿ ಐಸೋಲೇಶನ್

ಬಾಲಕಿಯ ಹೇಳಿಕೆ ಅನ್ವಯ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕಮಲವ್ವ ಬಲೂರು ಉಪನಗರ ಠಾಣೆಗೆ ದೂರು ಸಲ್ಲಿಸಿದ್ದು, ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವರ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ. ಸದ್ಯ ಈ ಕುರಿತಂತೆ ಪ್ರಕರಣ ದಾಖಲಿಸಿಕೊಂಡಿರುವ ಉಪನಗರ ಠಾಣೆ ಪೊಲೀಸರು, ತನಿಖೆ ಕೈಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next