Advertisement

ಎಲ್ಲಾ ಮಾದರಿ ಕ್ರಿಕೆಟ್ ಗೆ ವಿದಾಯ ಹೇಳಿದ ಟರ್ಬನೇಟರ್ ಹರ್ಭಜನ್ ಸಿಂಗ್

02:56 PM Dec 24, 2021 | Team Udayavani |

ಮುಂಬೈ: ಟೀಂ ಇಂಡಿಯಾದ ಆಫ್ ಸ್ಪಿನ್ನರ್ ಹರ್ಭಜನ್ ಸಿಂಗ್ ಅವರು ಇಂದು ಎಲ್ಲಾ ಮಾದರಿ ಕ್ರಿಕೆಟ್ ಗೆ ವಿದಾಯ ಘೋಷಣೆ ಮಾಡಿದ್ದಾರೆ.

Advertisement

ಈ ಬಗ್ಗೆ ಟ್ವೀಟ್ ಮಾಡಿರುವ ಭಜ್ಜಿ, “ಎಲ್ಲಾ ಒಳ್ಳೆಯ ವಿಷಯಗಳು ಕೊನೆಗೊಳ್ಳುತ್ತದೆ. ಇಂದು ನಾನು ಜೀವನದಲ್ಲಿ ಎಲ್ಲವನ್ನೂ ನೀಡಿದ ಆಟಕ್ಕೆ ವಿದಾಯ ಹೇಳುತ್ತಿದ್ದೇನೆ, ಈ 23 ವರ್ಷಗಳ ಸುದೀರ್ಘ ಪ್ರಯಾಣವನ್ನು ಸುಂದರ ಮತ್ತು ಸ್ಮರಣೀಯವಾಗಿ ಮಾಡಿದ ಪ್ರತಿಯೊಬ್ಬರಿಗೂ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ನನ್ನ ಹೃತ್ಪೂರ್ವಕ ಧನ್ಯವಾದಗಳು” ಎಂದಿದ್ದಾರೆ.

41 ವರ್ಷ ಪ್ರಾಯದ ಹರ್ಭಜನ್ ಸಿಂಗ್ ಅವರು 1998ರ ಮಾರ್ಚ್ 25ರಂದು ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ್ದರು. 103 ಟೆಸ್ಟ್, 236 ಏಕದಿನ ಪಂದ್ಯಗಳು ಮತ್ತು 28 ಅಂತಾರಾಷ್ಟ್ರೀಯ ಟಿ20 ಪಂದ್ಯಗಳನ್ನು ಆಡಿದ್ದಾರೆ.

ಆರಂಭದಲ್ಲಿ ಅನಿಲ್ ಕುಂಬ್ಳೆ ಜೊತೆಗೆ ಎರಡನೇ ಸ್ಪಿನ್ನರ್ ಆಗಿ ಆಡುತ್ತಿದ್ದ ಹರ್ಭಜನ್ ಸಿಂಗ್ ಅವರು 2007ರ ಟಿ20 ವಿಶ್ವಕಪ್, 2011ರ ಏಕದಿನ ವಿಶ್ವಕಪ್ ಮತ್ತು 2013ರ ಚಾಂಪಿಯನ್ಸ್ ಟ್ರೋಫಿ ಗೆಲುವಿನ ತಂಡದ ಸದಸ್ಯರಾಗಿದ್ದರು.

Advertisement

ಹರ್ಭಜನ್ ಸಿಂಗ್ ಅವರು 2016ರಲ್ಲಿ ತನ್ನ ಕೊನೆಯ ಅಂತಾರಾಷ್ಟ್ರೀಯ ಪಂದ್ಯವಾಡಿದ್ದರು. ನಂತರ ಐಪಿಎಲ್ ನಲ್ಲಿ ಆಡುತ್ತಿದ್ದ ಹರ್ಭಜನ್ ಸಿಂಗ್, ಈ ಬಾರಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಭಾಗವಾಗಿದ್ದರೂ ಆಡುವ ಅವಕಾಶ ಪಡೆದಿರಲಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next