ಮೈಸೂರು: ಪ್ರತಿಯೊಬ್ಬರಿಗೂ ಜೀವನದಲ್ಲಿ ಒಂದಲ್ಲಾ ಒಂದು ಸಮಸ್ಯೆ ಇರುತ್ತದೆ. ಎಲ್ಲಾ ಕಷ್ಟಗಳನ್ನು ಮರೆತು ಆರೋಗ್ಯದಿಂದ ಇರಲು ಹಾಗೂ ಪ್ರತಿಯೊಂದು ರೋಗಕ್ಕೂ ಹಾಸ್ಯ ಉತ್ತಮವಾದ ರಾಮಬಾಣ ಎಂದು ಸಂಸದೆ ಸುಮಲತಾ ಹೇಳಿದರು.
ಜೆ.ಕೆ.ಮೈದಾನದಲ್ಲಿ ಆಯೋಜಿಸಿದ್ದ ಚುಟುಕು ಹಾಸ್ಯೋತ್ಸವಕ್ಕೆ ಚಾಲನೆ ಮಾಡಿ ಮಾತನಾಡಿದ ಅವರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮಹಿಳಾ ದಸರಾದಲ್ಲಿ ಮಹಿಳೆಯರಿಗಾಗಿ ವಿವಿಧ ಕಾರ್ಯಕ್ರಮ ಆಯೋಜಿಸಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸಿರುವುದಕ್ಕೆ ಸಂತೋಷ ವ್ಯಕ್ತಪಡಿಸಿದರು.
ನಾನು ಹುಟ್ಟಿ ಬೆಳೆದ ಮೈಸೂರು ನಗರಕ್ಕೆ ಬಂದಿದೇªನೆ. ಎಲ್ಲರೂ ಪ್ರೀತಿ ವಿಶ್ವಾಸದಿಂದ ಸ್ವಾಗತಿಸುತ್ತಿರುವುದಕ್ಕೆ ಸಂತೋಷವಾಗಿದೆ ಎಂದರು. ಸಚಿವ ವಿ.ಸೋಮಣ್ಣ ಮಾತನಾಡಿ, ಉಸ್ತುವಾರಿ ಸಚಿವನಾಗಿ ಅಧಿಕಾರವಹಿಸಿಕೊಂಡ ಬಳಿಕ ಇದೇ ಮೊದಲ ಬಾರಿಗೆ ಸಂಸದೆ ಸುಮಲತಾ ಜತೆ ವೇದಿಕೆ ಹಂಚಿಕೊಂಡಿದ್ದೇನೆ ಎಂದರು.
ಮಹಿಳಾ ಮತ್ತು ಮಕ್ಕಳ ದಸರಾ ಉಪಸಮಿತಿಯಿಂದ ಕಳೆದ ಮೂರು ದಿನಗಳಿಂದ ಬಹಳ ಅಚ್ಚುಕಟ್ಟಾಗಿ ಎಲ್ಲಾ ಕೆಲಸ ಮಾಡುತ್ತಿದ್ದಾರೆ ಎಂದರು. ಕಾರ್ಯಕ್ರಮದಲ್ಲಿ ಜಿಪಂ ಅಧ್ಯಕ್ಷೆ ಪರಿಮಳ, ಸದಸ್ಯೆ ಮಂಗಳಾ, ಮಹಿಳಾ ಮತ್ತು ಮಕ್ಕಳ ದಸರಾ ಉಪಸಮಿತಿ ಅಧ್ಯಕ್ಷೆ ವಿದ್ಯಾಅರಸ್, ಸಮಿತಿ ಉಪಾಧ್ಯಕ್ಷರಾದ ಟಿ.ಎನ್. ಶಾಂತ, ಅನ್ನಪೂರ್ಣ,
ರತ್ನ ಲಕ್ಷ್ಮಣ್, ಮಹಿಳಾ ಮತ್ತು ಮಕ್ಕಳ ಕಾರ್ಯಾಧ್ಯಕ್ಷೆ ಕೆ.ಪದ್ಮ, ಕಿರುತೆರೆಯ ಒಗ್ಗರಣೆ ಡಬ್ಬಿ ಹಾಗೂ ಬಿಗ್‌ಬಾಸ್ ಖ್ಯಾತಿಯ ಶ್ರೀಮುರಳಿ, ಮಹಿಳಾ ಮತ್ತು ಮಕ್ಕಳ ದಸರಾ ಉಪಸಮಿತಿಯ ಸದಸ್ಯರಾದ ಛಾಯಾದೇವಿ, ಭಾಗ್ಯ ಮಾದೇಶ್, ರುಕ್ಮಿಣಿ, ಗಾಯತ್ರಮ್ಮ ಇತರರಿದ್ದರು.