ಹೊಸಪೇಟೆ: ವಿಶ್ವಪ್ರಸಿದ್ಧ ಹಂಪಿ ಪರಿಸರ ಹಾಗೂ ಸ್ಮಾರಕಗಳ ರಕ್ಷಣೆಗೆ ಸಂಕಲ್ಪಮಾಡಿರುವ ಹಂಪಿ ವಿಶ್ವ ಪರಂಪರೆ ಪ್ರದೇಶ ನಿರ್ವಹಣಾ ಪ್ರಾಧಿಕಾರ, ಹಂಪಿ ಪ್ರದೇಶದಲ್ಲಿ ಪ್ಲಾಸ್ಟಿಕ್ ನಿಷೇಧಕ್ಕೆ ಮುಂದಾಗಿದೆ. ಹಂಪಿ ಪ್ರದೇಶದಲ್ಲಿ ಪ್ಲಾಸ್ಟಿಕ್ ಮಾರಾಟ ಹಾಗೂ ಬಳಕೆ ಮಾಡುವ ಅಂಗಡಿ-ಮುಂಗಟ್ಟುಗಳ ವ್ಯಾಪಾರಸ್ಥರು ಇನ್ನುಂದೆ ಯಾವುದೇ ಕಾರಣಕ್ಕೂ ಪ್ಲಾಸ್ಟಿಕ್ ಬಳಕೆ ಹಾಗೂ ಮಾರಾಟ ಮಾಡದಂತೆ ತಾಕೀತು ಮಾಡಿದೆ. ಒಂದೊಮ್ಮೆ ಮಾರಾಟ, ಬಳಕೆ ಮಾಡಿದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ.
ಹಂಪಿ ಸ್ಥಳೀಯ ಯೋಜನಾ ಪ್ರದೇಶದ ಕೋರ್ ಜೋನ್ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ಸಣ್ಣಪುಟ್ಟ ವ್ಯಾಪಾರಸ್ಥರು, ಪ್ಲಾಸ್ಟಿಕ್ ಕ್ಯಾರಿಬ್ಯಾಗ್, ಭಿತ್ತಿ ಪತ್ರ, ತೋರಣ, ಫ್ಲೆಕ್ಸ್, ಭಾವುಟ, ತಟ್ಟೆ, ಲೋಟ, ಚಮಚ, ಮತ್ತು ಊಟದ ಟೇಬಲ್ ಮೇಲೆ ಹಾಸುವ ಪ್ಲಾಸ್ಟಿಕ್ ಹಾಳೆ, ಥರ್ಮಕೋಲ್ ಹಾಗೂ ಮೈಕ್ರೋ ಬೀಡ್ಸ್‌ನಿಂದ ತಯಾರದಂತ ವಸ್ತುಗಳನ್ನು ಬಳಕೆ ಮಾಡದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಈ ಹಿನ್ನೆಲೆಯಲ್ಲಿ ಹಂಪಿ ವಿಶ್ವ ಪರಂಪರೆ ಪ್ರದೇಶ ನಿರ್ವಹಣಾ ಪ್ರಾಧಿಕಾರದ ಆಯುಕ್ತ ಮೋತಿ ಲಾಲ್ ಲಮಾಣಿ ನೇತೃತ್ವದಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ನಗರದ ಹಂಪಿಯ ಪಾರ್ಕಿಂಗ್ ಸ್ಥಳ, ಜನತಾ ಪ್ಲಾಟ್ ಹಾಗೂ ನದಿ ಪಾತ್ರದಲ್ಲಿರುವ ಸಣ್ಣಪುಟ್ಟ ಅಂಗಡಿ-ಮುಂಗಟ್ಟುಗಳ ವ್ಯಾಪಾರಿಗಳಿಗೆ ಸಂಪೂರ್ಣ ಪ್ಲಾಸ್ಟಿಕ್ ಬಳಕೆ ಮಾಡದಂತೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಆರೋಗ್ಯ ನಿರೀಕ್ಷಕ ಇಮಿಯಾಜ್, ಹಂಪಿ ಗ್ರಾಮ ಲೆಕ್ಕಿಗ, ದೇವಂದ್ರಪ್ಪ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.
ಹಂಪಿ ಸ್ಥಳೀಯ ಯೋಜನಾ ಪ್ರದೇಶದ ಕೋರ್ ಜೋನ್ ವ್ಯಾಪ್ತಿಯಲ್ಲಿ ಬರುವ ಗ್ರಾಮಹಾಗೂ ಪಟ್ಟಣಗಳಲ್ಲಿ ಕಡ್ಡಾ ಯವಾಗಿ ಪ್ಲಾಸ್ಟಿಕ್ ಬಳಕೆ, ಸಾಗಾಣಿಕೆ ತಯಾರಿಕೆಯನ್ನು ಎಲ್ಲಾ ವ್ಯಾಪಾರಸ್ಥರು, ಫ್ಲೆಕ್ಸ್ ಮುದ್ರಣಕಾರರಿಗೆ ಏಳು ದಿನಗಳಲ್ಲಿ ಸಂಪೂರ್ಣ ಪ್ಲಾಸ್ಟಿಕ್ ಬಳಕೆ ನಿಲ್ಲಿಸಬೇಕು. ಪುನಃ ಪ್ಲಾಸ್ಟಿಕ್ ಮಾಡಿದರೆ ದಂಡ ವಿಧಿಸಿ ಕಾನೂನು ಕ್ರಮ ಜರುಗಿಸಲಾಗವುದು.
ಮೋತಿಲಾಲ್ ಲಮಾಣಿ, ಆಯುಕ್ತರು ಹಂಪಿ ವಿಶ್ವ ಪರಂಪರೆ ಪ್ರದೇಶ ನಿರ್ವಹಣಾ ಪ್ರಾಧಿಕಾರ