Advertisement

Sri Lanka Tour: ಹಾರ್ದಿಕ್‌ಗೆ ಟಿ20, ರಾಹುಲ್‌ಗೆ ಏಕದಿನ ನಾಯಕತ್ವ?

02:00 AM Jul 11, 2024 | Team Udayavani |

ಹೊಸದಿಲ್ಲಿ: ಭಾರತ ಕ್ರಿಕೆಟ್‌ ತಂಡದ ಶ್ರೀಲಂಕಾ ಪ್ರವಾಸದ ವೇಳೆ ಟಿ20 ತಂಡಕ್ಕೆ ಆಲ್‌ರೌಂಡರ್‌ ಹಾರ್ದಿಕ್‌ ಪಾಂಡ್ಯ ಮತ್ತು ಏಕದಿನ ತಂಡಕ್ಕೆ ಬ್ಯಾಟರ್‌ ಕೆ.ಎಲ್‌. ರಾಹುಲ್‌ ನಾಯಕರಾಗಿ ಆಯ್ಕೆಯಾಗುವ ಸಾಧ್ಯತೆಯಿದೆ.

Advertisement

ಟಿ20 ವಿಶ್ವಕಪ್‌ ಗೆದ್ದ ಬೆನ್ನಲ್ಲೇ ನಾಯಕ ರೋಹಿತ್‌ ಶರ್ಮ ಟಿ20 ಅಂತಾರಾಷ್ಟ್ರೀಯ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದ್ದರು. ಹೀಗಾಗಿ ಟಿ20 ಮಾದರಿಯಲ್ಲಿ ಹಾರ್ದಿಕ್‌ ಪಾಂಡ್ಯ ನಾಯಕರಾಗುವ ನಿರೀಕ್ಷೆ ಇದೆ. ಏಕದಿನ ಸರಣಿಯ ವೇಳೆ ರಾಹುಲ್‌ಗೆ ನಾಯಕತ್ವ ಲಭಿಸಬಹುದು. ಲಂಕಾ ಪ್ರವಾಸದ ವೇಳೆ ರೋಹಿತ್‌ ಶರ್ಮ ಮತ್ತು ವಿರಾಟ್‌ ಕೊಹ್ಲಿ ವಿಶ್ರಾಂತಿ ಪಡೆಯಲಿದ್ದಾರೆ ಎಂದೂ ಹೇಳಲಾಗುತ್ತಿದೆ.

ಭಾರತ ತಂಡ ಶ್ರೀಲಂಕಾದಲ್ಲಿ ಜು. 27ರಿಂದ 3 ಪಂದ್ಯಗಳ ಟಿ20 ಮತ್ತು 3 ಪಂದ್ಯಗಳ ಏಕದಿನ ಸರಣಿಯಲ್ಲಿ ಪಾಲ್ಗೊಳ್ಳಲಿದೆ.

 

Advertisement

Udayavani is now on Telegram. Click here to join our channel and stay updated with the latest news.

Next