ಮುಂಬೈ: ಮುಂದಿನ ತಿಂಗಳ ಆರಂಭದಲ್ಲಿ ನಡೆಯಲಿರುವ ಶ್ರೀಲಂಕಾ ವಿರುದ್ದದ ಟಿ20 ಸರಣಿಗೂ ರೋಹಿತ್ ಶರ್ಮಾ ಲಭ್ಯರಾಗುವ ಸಾಧ್ಯತೆ ಕಡಿಮೆ ಎನ್ನಲಾಗಿದೆ. ಹೀಗಾಗಿ ತಂಡದ ನಾಯಕತ್ವವನ್ನು ಹಾರ್ದಿಕ್ ಪಾಂಡ್ಯ ಹೆಗಲಿಗೇರಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
ರೋಹಿತ್ ಶರ್ಮಾ ಅವರ ಹೆಬ್ಬೆರಳಿನ ಗಾಯ ಗುಣವಾಗಲು ಇನ್ನೂ ಸ್ವಲ್ಪ ಸಮಯ ಬೇಕಾಗಬಹುದು ಎಂದು ತಿಳಿದುಬಂದಿದೆ. ಆದರೆ, ರೋಹಿತ್ ಟಿ20 ನಾಯಕತ್ವದಿಂದ ಕೆಳಗಿಳಿಯುತ್ತಾರೆಯೇ ಅಥವಾ ಸದ್ಯಕ್ಕೆ ವಿಚಾರವನ್ನು ಹೀಗೆ ಮುಂದುವರಿಸಿಕೊಂಡು ಹೋಗಲಾಗುತ್ತದೆಯೇ ಎಂಬ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ.
ಇದನ್ನೂ ಓದಿ:ಮನೆಯಲ್ಲೇ ಕುಳಿತರೆ ಸಂಬಳ ಕೊಡಲ್ಲ…ಪ್ರತಿಭಟನಾ ನಿರತ ಕಾಶ್ಮೀರಿ ಪಂಡಿತರಿಗೆ ಗವರ್ನರ್ ಎಚ್ಚರಿಕೆ
ಟಿ20 ವಿಶ್ವಕಪ್ ಸೆಮಿಫೈನಲ್ ನಿಂದ ಟೀಂ ಇಂಡಿಯಾ ನಿರ್ಗಮಿಸಿದಾಗಿನಿಂದ ಹೊಸ ಆಯ್ಕೆ ಸಮಿತಿಯು ಅಧಿಕಾರ ವಹಿಸಿಕೊಂಡ ನಂತರ ನಾಯಕನನ್ನು ಬದಲಾಯಿಸಲಾಗುವುದು ಎಂಬುದು ಸ್ಪಷ್ಟವಾಗಿದ್ದರೂ, ಇನ್ನೂ ಯಾವುದೇ ಔಪಚಾರಿಕ ಘೋಷಣೆ ಮಾಡಿಲ್ಲ.
ಊಹಾಪೋಹಗಳ ಹೊರತಾಗಿಯೂ, ಅಪೆಕ್ಸ್ ಕೌನ್ಸಿಲ್ ಸಭೆಯಲ್ಲಿ ಭಾರತದ ಟಿ20 ನಾಯಕತ್ವದ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎನ್ನಲಾಗಿದೆ.