ಮುಂಬೈ: ಭಾರತದ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರ 5 ಕೋಟಿ ಮೌಲ್ಯದ ಎರಡು ವಾಚ್‌ಗಳನ್ನು ಕಸ್ಟಮ್ಸ್ ಇಲಾಖೆಯು ವಿಮಾನ ನಿಲ್ದಾಣದಲ್ಲಿ ಜಪ್ತಿ ಮಾಡಿದೆ.
ಐಸಿಸಿ ಟಿ20 ವಿಶ್ವಕಪ್ ನಿರಾಶಾದಾಯಕ ಫಲಿತಾಂಶದ ನಂತರ ಭಾರತೀಯ ಆಟಗಾರರು ತವರಿಗೆ ಹಿಂದಿರುಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಈ ವೇಳೆ ಹಾರ್ದಿಕ್ ಪಾಂಡ್ಯ ಅವರನ್ನು ಕಸ್ಟಮ್ಸ್ ಇಲಾಖೆ ತಡೆದು 5 ಕೋಟಿ ರೂಪಾಯಿ ಮೌಲ್ಯದ ಎರಡು ವಾಚ್‌ಗಳನ್ನು ವಶಕ್ಕೆ ಪಡೆದಿದೆ.
ಹಾರ್ದಿಕ್ ಪಾಂಡ್ಯ ಬಳಿಕ ದುಬಾರಿ ವಾಚ್ ಗಳ ಇನ್ ವಾಯ್ಸ್ ಇರಲಿಲ್ಲ. ಹೀಗಾಗಿ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಐಸಿಸಿ ಟಿ20 ವಿಶ್ವಕಪ್ ತಂಡದಲ್ಲಿ ಭಾರತೀಯರಿಲ್ಲ!
ಭಾರತ ತಂಡ ಟಿ20 ವಿಶ್ವಕಪ್ ನಲ್ಲಿ ನಿರಾಶಾದಾಯಕ ಪ್ರದರ್ಶನ ನೀಡಿದೆ. ಹಲವು ವರ್ಷಗಳ ಬಳಿಕ ಮೊದಲ ಬಾರಿಗೆ ಸೆಮಿ ಫೈನಲ್ ಪ್ರವೇಶಿಸಲೂ ವಿಫಲವಾಗಿದೆ. ಭಾರತ ತಂಡ ಬುಧವಾರದಿಂದ ( ನ.17) ನ್ಯೂಜಿಲ್ಯಾಂಡ್ ವಿರುದ್ಧ ಟಿ20 ಸರಣಿ ಆಡಲಿದ್ದು, ಹಾರ್ದಿಕ್ ಪಾಂಡ್ಯ ತಂಡದಲ್ಲಿ ಸ್ಥಾನ ಪಡೆದಿಲ್ಲ.