ಬೆಂಗಳೂರು: ಶಾರ್ಟ್ ಸರ್ಕ್ನೂಟ್‌ನಿಂದ ಬಳೆಪೇಟೆ ಯ ಲ್ಲಿರುವ ಹಾರ್ಡ್‌ವೇರ್ ಶಾಪ್‌ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, 30 ಲಕ್ಷ ರೂ. ಮೌಲ್ಯದ ಪೇಂಟ್ ಬಾಕ್ಸ್ ಹಾಗೂ ಇತರೆ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ.
ಬಳೇಪೇಟೆಯಲ್ಲಿ ಮೂರು ಅಂತಸ್ತಿನ ಕಟ್ಟಡ ಇದ್ದು, ಮೊದಲ ಮಹಡಿಯಲ್ಲಿ ಕೃಷ್ಣಮೂರ್ತಿ ಎಂಬ ವರು ಶ್ರೀಲಕ್ಷ್ಮೀ ನರಸಿಂಹ ಟ್ರೇಡರ್ಸ್ ಆ್ಯಂಡ್ ಹಾರ್ಡ್ ವೇರ್ ಶಾಪ್ ಹೊಂದಿದ್ದಾರೆ. ನೆಲ ಮಹಡಿ ಯಲ್ಲಿ ಪೇಯಿಂಟ್ ಬಾಕ್ಸ್‌ಗಳನ್ನು ಸಂಗ್ರಹಿಸಿಡಲಾಗಿದೆ.
ಶುಕ್ರವಾರ ರಾತ್ರಿ 10 ಗಂಟೆಗೆ ಬೆಂಕಿ ಅವಘಡ ಸಂಭವಿಸಿದ್ದು, ಮೊದಲಿಗೆ ಪೇಯಿಂಟ್ ಬಾಕ್ಸ್‌ಗಳನ್ನು ಇಡಲಾಗಿದ್ದ ಮಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬಳಿಕ ಕೆಲ ಕ್ಷಣಗಳಲ್ಲೇ ಇಡೀ ಕಟ್ಟಡಕ್ಕೆ ಬೆಂಕಿಯ ಕಿನ್ನಾಲಿಗೆ ಅವರಿಸಿಕೊಂಡು ದುರಂತ ಸಂಭವಿಸಿದೆ. ಇದೇ ವೇಳೆ ಅವಘಡದಲ್ಲಿ ಕಟ್ಟಡದ ಒಳಗೆ ಪ್ರವೇಶಿಸಿದ್ದ ಯುವಕನೊಬ್ಬ ಹೊರಬರಲಾಗದೆ ಸಿಲುಕಿಕೊಂಡಿದ್ದ. ಅದೇ ವೇಳೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ, ಬೆಂಕಿ ನಂದಿಸಿ ಯುವಕನನ್ನು ರಕ್ಷಣೆ ಮಾಡಿದ್ದಾರೆ.
ಬಳಿಕ ಜೆಸಿಬಿ ಯಂತ್ರ ಬಳಸಿ ಕಟ್ಟಡದ ಶೆಟರ್ ಮುರಿದು ಸತತ ನಾಲ್ಕು ಗಂಟೆಗೂ ಹೆಚ್ಚು ಕಾಲ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಯಶಸ್ವಿಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದರು. ಈ ಸಂಬಂಧ ನಗರದ ಉಪ್ಪಾರಪೇಟೆ ಠಾಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.