Advertisement
ಶಾಸಕ ಎಸ್.ರಾಮಪ್ಪ ಪೂಜೆ ಸಲ್ಲಿಸುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು. ದೇವಸ್ಥಾನ ರಸ್ತೆಯ ತೇರುಗಡ್ಡೆ ವೃತ್ತದಿಂದ. ಶಿವಮೊಗ್ಗ ವೃತ್ತದವರೆಗೆ ಭಕ್ತರು ಹರ ಹರ ಮಾಹದೇವ್, ಗೋವಿಂದಾ… ಗೋವಿಂದಾ… ಎಂದು ನಾಮಸ್ಮರಣೆ ಮಾಡುತ್ತಾ ರಥ ಎಳೆದರು.
Related Articles
Advertisement
ದೇವಸ್ಥಾನದ ಸಂಚಾಲನಾ ಸಮಿತಿ, ಕೋಟೆಕೇರಿ ಗಜಾನನ ಯುವಕ ಸಂಘದ ಸಹಯೋಗದಲ್ಲಿ ಸಮೀಪದ ಬಿರ್ಲಾ ಕಲ್ಯಾಣ ಮಂಟಪದಲ್ಲಿ, ದೇವಸ್ಥಾನ ರಸ್ತೆಯಲ್ಲಿ ನಡುವಲಪೇಟೆ ಯುವಕ ಸಂಘದಿಂದ ಭಕ್ತರಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು. ವಾಸವಿ ಯುವಜನ ಸಂಘ, ಕಾಳಿದಾಸ ಸ್ವಸ್ತಿಕ, ಧನ್ವಂತರಿ ಪತಂಜಲಿ ಮತ್ತಿತರೆ ಸಂಘಗಳಿಂದ ಉಪಾಹಾರ, ಮಜ್ಜಿಗೆ, ಶರಬತ್ ಸಹ ವಿತರಿಸಲಾಯಿತು.
ದೇವಸ್ಥಾನದಲ್ಲಿ ಬೆಳಗಿನ ಜಾವದಿಂದಲೇ ಗಣಪತಿ ಪೂಜೆ, ರುದ್ರಾಭಿಷೇಕ, ಅಲಂಕಾರ, ನವಗ್ರಹ ಪೂಜೆ, ಜಪ ಹೋಮ ಹವನಾದಿಗಳನ್ನು ನಡೆದವು. ರಥೋತ್ಸವ ನಿಮಿತ್ತ ಸೋಮವಾರ ಸಂಜೆ 6-30ಕ್ಕೆ ಕಲಾವಿದೆ ರಾಧಾ ನೇತೃತ್ವದಲ್ಲಿ ಸಂಕರ್ಷಣ ನೃತ್ಯ ಮತ್ತು ಕಲಾ ಕೇಂದ್ರದ ವಿದ್ಯಾರ್ಥಿಗಳಿಂದ ಭರತನಾಟ್ಯ ಕಾರ್ಯಕ್ರಮವಿದೆ.
3 ದಿನ ಜಾತ್ರೆ: ರಥೋತ್ಸವ ನಿಮಿತ್ತ ದೇವಸ್ಥಾನ ರಸ್ತೆಯಲ್ಲಿ ಖಾರಾ ಮಂಡಕ್ಕಿ, ಬೆಂಡು, ಬತಾಸೆ, ಮಕ್ಕಳ ಆಟಿಕೆ, ಬಳೆ ಸೇರಿದಂತೆ ಮಹಿಳೆಯರ ಅಲಂಕಾರಿಕ ವಸ್ತುಗಳ ನೂರಾರು ಅಂಗಡಿಗಳು ತಲೆ ಎತ್ತಿದ್ದು, 3 ದಿನ ಜಾತ್ರಾ ಸಡಗರ ನಡೆಯಲಿದೆ.