ಹರಿಹರ: ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶದಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಬಗ್ಗೆ ಇಡೀ ವಿಶ್ವವೇ ಮೆಚ್ಚುಗೆ ವ್ಯಕ್ತಪಡಿಸಿದೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಹೇಳಿದರು.
ಕೇಂದ್ರದ ಜನಪ್ರಿಯ ಯೋಜನೆಗಳನ್ನು ಜನಸಾಮಾನ್ಯರಿಗೆ ತಿಳಿಸುವ ನಿಟ್ಟಿನಲ್ಲಿ ನಗರದ ಜೆ.ಸಿ. ಬಡಾವಣೆಯಲ್ಲಿ ಹಮ್ಮಿಕೊಂಡಿದ್ದ ಮನೆ ಮನೆ ಸಂಪರ್ಕ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕೋವಿಡ್-19ನಿಂದಾಗಿ ದೇಶ ಆರ್ಥಿಕ ಸಂಕಷ್ಟದಲ್ಲಿದ್ದರೂ 20 ಲಕ್ಷ ಕೋಟಿ ರೂ. ಗಳ ವಿಶೇಷ ಪ್ಯಾಕೇಜ್ ನೀಡಿರುವ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಪ್ರಪಂಚಕ್ಕೆ ಮಾದರಿಯಾಗಿದೆ ಎಂದರು.
ಲಾಕ್‌ಡೌನ್ ಸಮಯದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಡವರಿಗೆ, ನಿರ್ಗತಿಕರಿಗೆ ಹಾಗೂ ವಲಸೆ ಕಾರ್ಮಿಕರ ಬ್ಯಾಂಕ್ ಖಾತೆಗಳಿಗೆ ಹಣ ಹಾಕುವ ಮೂಲಕ ಜನಸಮಾನ್ಯರ ನೆರವಿಗೆ ಬಂದಿದೆ. ವಿಶೇಷ ಪ್ಯಾಕೇಜ್ ಮೂಲಕ ರೈತರಿಗೆ ಹಾಗೂ ಕೈಗಾರಿಕೆಗಳಿಗೆ ನೆರವಾಗಿದೆ. ಕೋವಿಡ್ ವೈರಸ್ ಗೆ ಚುಚ್ಚುಮದ್ದು ಕಂಡುಹಿಡಿಯುವವರೆಗೂ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಕಡ್ಡಾಯವಾಗಬೇಕಿದೆ.
ಚೀನಾದ ವಸ್ತುಗಳನ್ನು ಬಹಿಷ್ಕರಿಸಿ ಸ್ವದೇಶಿ ಉತ್ಪನ್ನಗಳನ್ನು ಬಳಸುವ ಮೂಲಕ ದೇಶದ ಅರ್ಥಿಕತೆಯನ್ನು ಸದೃಢಗೊಳಿಸಲು ಪ್ರತಿಯೊಬ್ಬರೂ ಶ್ರಮಿಸಬೇಕು ಎಂದು ಕರೆ ನೀಡಿದರು. ಮಾಜಿ ಶಾಸಕ ಬಿ.ಪಿ. ಹರೀಶ್, ಬಿಜೆಪಿ ಜಿಲ್ಲಾಧ್ಯಕ್ಷ ಎಸ್.ಎಂ. ವೀರೇಶ್ ಹನಗವಾಡಿ, ಜಿಪಂ ಸದಸ್ಯ ವಾಗೀಶ್ ಸ್ವಾಮಿ, ಯಶವಂತ್‌ರಾವ್ ಜಾಧವ್, ದೂಡಾ ಅಧ್ಯಕ್ಷ ಶಿವಕುಮಾರ್ ರಾಜನಹಳ್ಳಿ, ಸದಸ್ಯ ರಾಜು ರೋಖಡೆ, ನಗರ ಘಟಕದ ಅಧ್ಯಕ್ಷ ಅಜಿತ್ ಸಾವಂತ್, ಗ್ರಾಮಾಂತರ ಅಧ್ಯಕ್ಷ ಲಿಂಗರಾಜ್ ಹಿಂಡಸಘಟ್ಟ, ನಗರಸಭಾ ಸದಸ್ಯರಾದ ನೀತಾ ಮೆಹರವಾಡೆ, ಅಶ್ವಿನಿ ಕೃಷ್ಣ, ರಜನಿಕಾಂತ್, ವಿಜಯಕುಮಾರ್, ಮುಖಂಡರಾದ ಮಂಜಾ ನಾಯ್ಕ, ಪ್ರವೀಣ್ ಜಿ. ಪವಾರ್, ರಾಜೇಶ್ ವೆರ್ಣೆಕರ್, ನಾಗರಾಜ ಐರಣಿ, ಮಾಲತೇಶ್ ಭಂಡಾರಿ, ಬಾತಿ ಚಂದ್ರಶೇಖರ್, ತುಳಜಪ್ಪ ಭೂತೆ, ಮೋತ್ಯಾ ನಾಯ್ಕ ಇತರರು ಇದ್ದರು.