Advertisement

ಹರಿಹರ ಪಂಚಮಸಾಲಿ ಪೀಠದ ವಚನಾನಂದ ಶ್ರೀಗಳಿಗೆ ಪಿತೃ ವಿಯೋಗ

09:59 PM Jan 02, 2023 | Team Udayavani |

ದಾವಣಗೆರೆ: ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಶ್ರೀ ವಚನಾನಂದ ಸ್ವಾಮೀಜಿ ಅವರ ಪೂರ್ವಾಶ್ರಮದ ತಂದೆ ದುಂಡಪ್ಪಾ ಅದೃಶ್ಯಪ್ಪಾ ಗೌರಗೊಂಡ (82) ಸೋಮವಾರ ಮಹಾರಾಷ್ಟ್ರ ರಾಜ್ಯದ ಮೀರಜ್‌ನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

Advertisement

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ತಾಂವಶಿ ಗ್ರಾಮದ ಕೃಷಿ ಕುಟುಂಬದ ದುಂಡಪ್ಪಾ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರನ್ನು ಮೀರಜ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ನಿಧನರಾದರು.

ಮೃತರು ಪತ್ನಿ, ವಚನಾನಂದ ಸ್ವಾಮೀಜಿ ಸೇರಿದಂತೆ ಇಬ್ಬರು ಪುತ್ರರು, ಅಪಾರ ಬಂಧು-ಬಳಗ ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಸ್ವಗ್ರಾಮ ತಾಂವಶಿಯಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಶ್ರೀ ವಚನಾನಂದ ಸ್ವಾಮೀಜಿಯವರ ಪೂರ್ವಾಶ್ರಮದ ತಂದೆಯವರ ನಿಧನಕ್ಕೆ ಜಗದ್ಗುರು ಪೀಠದ ಪ್ರಧಾನ ಧರ್ಮದರ್ಶಿ ಬಿ.ಸಿ.ಉಮಾಪತಿ ಇತರರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next