Advertisement

ಅನ್ನ-ನೀರಿನಷ್ಟೇ ವಿಜ್ಞಾನ-ತಂತ್ರಜ್ಞಾನ ಮಹತ್ವದ್ದು

01:36 PM Apr 05, 2019 | Naveen |

ಹರಿಹರ: ಆಧುನಿಕ ಜಗತ್ತಿನಲ್ಲಿ ವಿಜ್ಞಾನ ತಂತ್ರಜ್ಞಾನಗಳಿಗೆ ಅನ್ನ, ನೀರಿನಷ್ಟೆ ಮಹತ್ವವಿದೆ ಎಂದು ರಾಜ್ಯ ವಿಜ್ಞಾನ ಪರಿಷತ್‌ ಜಿಲ್ಲಾ ಸಮಿತಿ ಅಧ್ಯಕ್ಷರು ಹಾಗೂ ದಾವಣಗೆರೆ ಬಿಐಇಟಿ ಕಾಲೇಜಿನ ಜೈವಿಕ ತಂತ್ರಜ್ಞಾನ ವಿಭಾಗದ ಮುಖ್ಯಸ್ಥ ಡಾ| ಬಿ.ಇ.ರಂಗಸ್ವಾಮಿ ಹೇಳಿದರು.

Advertisement

ನಗರದ ಎಸ್‌ಜೆವಿಪಿ ಪದವಿ ಕಾಲೇಜಿನಲ್ಲಿ ಗುರುವಾರ ರಾಜ್ಯ ವಿಜ್ಞಾನ ಪರಿಷತ್‌, ವಿಜ್ಞಾನ, ತಂತ್ರಜ್ಞಾನ ಇಲಾಖೆ, ಕಾಲೇಜಿನ ಐಕ್ಯೂಎಸಿ ಸಹಭಾಗಿತ್ವದಲ್ಲಿ ಹಮ್ಮಿಕೊಂಡಿದ್ದ ಶಿವಮೊಗ್ಗ ವಲಯ ಮಟ್ಟದ ಪದವಿ ವಿದ್ಯಾರ್ಥಿಗಳ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆದಲ್ಲಿ ಉಪನ್ಯಾಸ ನೀಡಿದ ಅವರು, ಆಹಾರ, ಗಾಳಿ, ನೀರಿನಷ್ಟೆ ವಿಜ್ಞಾನ ಮತ್ತು ತಂತ್ರಜ್ಞಾನವೂ ಮನುಷ್ಯನ ಬದುಕಿಗೆ ಅತ್ಯವಶ್ಯವಾಗಿದೆ ಎಂದರು.

ಸ್ವಾತಂತ್ರ್ಯ ನಂತರದಲ್ಲಿ ಬರ ಪರಿಸ್ಥಿತಿಯಿಂದ ದೇಶ ಬಳಲುತ್ತಿದ್ದಾಗ ಸಹಾಯ ಕೋರಿ ಅಮೆರಿಕಾ ಪ್ರವಾಸ ಕೈಗೊಂಡಿದ್ದ ಅಂದಿನ ಪ್ರಧಾನಿ ಲಾಲ್‌ ಬಹಾದ್ದೂರ್‌ ಶಾಸ್ತ್ರಿಯವರಿಗೆ ನಿರಾಶೆಯಾಯಿತು. ಅಲ್ಲಿನ ವೈಜ್ಞಾನಿಕ ಬೆಳವಣಿಗೆ ಗಮನಿಸಿದ ಶಾಸ್ತ್ರೀಜಿ ಆಹಾರ ಸ್ವಾವಲಂಬನೆಯ ಶಪಥ ಕೈಗೊಂಡರು.
ವಿಜ್ಞಾನ ಮತ್ತು ತಂತ್ರಜ್ಞಾನ ಆಧರಿಸಿಯೇ ಅವರು ಅದರಲ್ಲಿ ಯಶಸ್ವಿಯೂ ಆದರು ಎಂದರು.

ಭಾರತದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಸಂಬಂಧಿ ಸಿದ ಸಂಶೋಧನೆ ಪ್ರಾಚೀನ ಕಾಲದಿಂದಲೂ ಪರಿಚಿತವಾದ ಕ್ಷೇತ್ರಗಳೇ ಆಗಿವೆ. ಪ್ರಾಚೀನ ಭಾರತ ಋಷಿಮುನಿಗಳ ಕಾಲದಿಂದಲೂ
ಸಂಶೋಧನೆಯಲ್ಲಿ ಅಗ್ರಸ್ಥಾನದಲ್ಲಿದೆ. ಸ್ವತಂತ್ರ್ಯ
ನಂತರವೂ ಅನೇಕ ಸಂಶೋಧನೆಗಳನ್ನು ನಡೆಸಿದ್ದು ಹಾಗೂ ಆ ವಿಷಯಗಳ ತಂತ್ರಜ್ಞಾನವನ್ನು ಕೊಡುವ ಶಿಕ್ಷಣ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಇದರ ಪರಿಣಾಮವಾಗಿ ಭಾರತಿಯರು ಹೆಮ್ಮೆ
ಪಡುವಂತಹ ವೈಜ್ಞಾನಿಕ ಸಾಧನೆ ಮಾಡಿದೆ ಎಂದರು.

ವಿಜ್ಞಾನ ಪ್ರಗತಿಯು ಒಂದು ದೇಶವನ್ನು ಶಕ್ತಿಶಾಲಿಗೊಳಿಸುತ್ತದೆ. ವಿದ್ಯಾರ್ಥಿಗಳು ಹೊಸ, ಹೊಸ ಪ್ರಯೋಗಗಳನ್ನು ಮಾಡುವುದರಿಂದ ಚಿಂತನಾ ಸಾಮರ್ಥ್ಯ ಹಾಗೂ ವೈಜ್ಞಾನಿಕ
ಮನೋಭಾವ ಹೆಚ್ಚುತ್ತದೆ. ವಿಜ್ಞಾನ ಪ್ರದರ್ಶನ, ಸ್ಪರ್ಧೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಈ ದಿಸೆಯಲ್ಲಿ ಪ್ರಾಧ್ಯಾಪಕರು, ಪೋಷಕರು ಬೆಂಬಲಿಸಬೇಕು ಎಂದರು.
ಸ್ಪರ್ಧೆಯಲ್ಲಿ ಶಿವಮೊಗ್ಗ ವಲಯ ಮಟ್ಟದ ವಿವಿಧ ಜಿಲ್ಲೆಯ ಕಾಲೇಜು ವಿದ್ಯಾರ್ಥಿಗಳು ತಮ್ಮ ವಿಜ್ಞಾನ ಮಾದರಿಗಳನ್ನು ಪ್ರದರ್ಶಿಸಿದರು.

Advertisement

ಸಂಸ್ಥೆಯ ಉಪಾಧ್ಯಕ್ಷ ಡಿ.ಎಂ. ಹಾಲಸ್ವಾಮಿ ಉದ್ಘಾಟಿಸಿದರು. ಪ್ರಾಚಾರ್ಯ ಪ್ರೊ | ಹದಡಿ ಯಲ್ಲಪ್ಪ ಅಧ್ಯಕ್ಷತೆ ವಹಿಸಿದ್ದರು.
ಬೆಂಗಳೂರು ಕರಾವಿಪ ಕಾರ್ಯಕಾರಿ ಸಮಿತಿ ಸದಸ್ಯ ಉದಯರತ್ನಕುಮಾರ್‌, ಕೌಶಿಕ್‌, ಸಂಸ್ಥೆಯ ಕಾರ್ಯದರ್ಶಿ ಪ್ರೊ | ಶಕುಂತಲಮ್ಮ ಗುರುಸಿದ್ದಯ್ಯ, ವಿಶೇಷ ಆಹ್ವಾನಿತರಾಗಿ ಸಂಸ್ಥೆಯ
ನಿರ್ದೇಶಕ ಮೂರ್ಕಲ್‌ ಜಯಣ್ಣ, ಐಕ್ಯೂಎಸಿ ಸಂಯೋಜಕರಾದ ಡಾ| ಎ.ಬಿ. ರಾಮಚಂದ್ರಪ್ಪ, ವೀರೇಶ್‌ ಶೆಟ್ಟರ್‌, ಆರ್‌. ಅಶ್ವಿ‌ನಿ, ಸಮರ್ಥರಾಮ್‌ ಮತ್ತಿತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next