Advertisement

Harini Amarasuriya: ಶ್ರೀಲಂಕಾಕ್ಕೆ 24 ವರ್ಷದ ಬಳಿಕ ಮೊದಲ ಮಹಿಳಾ ಪ್ರಧಾನ ಮಂತ್ರಿ ನೇಮಕ

12:37 AM Sep 25, 2024 | Team Udayavani |

ಕೊಲಂಬೋ: ಶ್ರೀಲಂಕಾದ ನೂತನ ಪ್ರಧಾನಿಯಾಗಿ ಹರಿಣಿ ಅಮರಸೂರ್ಯ ಮಂಗಳವಾರ ಪ್ರಮಾಣ ವಚನ ಸ್ವೀಕರಿಸಿದರು.

Advertisement

ಸಿರಿಮಾವೊ ಬಂಡಾರನಾಯಕೆ ಅನಂತರ ಅಂದರೆ 2000ನೇ ಇಸವಿ ಬಳಿಕ ಈ ಹುದ್ದೆಯನ್ನು ಅಲಂಕರಿಸಿದ ಮೊದಲ ಮಹಿಳಾ ನಾಯಕಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಇವರಿಗೆ ನ್ಯಾಯಾಂಗ, ಶಿಕ್ಷಣ, ಕಾರ್ಮಿಕ, ಕೈಗಾರಿಕೆ, ವಿಜ್ಞಾನ ಮತ್ತು ತಂತ್ರಜ್ಞಾನ, ಆರೋಗ್ಯ ಹಾಗೂ ಹೂಡಿಕೆ ಖಾತೆಗಳ ಜವಾಬ್ದಾರಿ ನೀಡಲಾಗಿದೆ. ಅಧ್ಯಕ್ಷೀಯ ಚುನಾವಣೆ ಅನಂತರ ರಾಜೀನಾಮೆ ನೀಡಿರುವ ಪ್ರಧಾನಿ ದಿನೇಶ್‌ ಗುಣವರ್ಧನೆ ಸ್ಥಾನಕ್ಕೆ ಇವರನ್ನು ಆಯ್ಕೆ ಮಾಡಲಾಗಿದೆ. ಹರಿಣಿ ಮಾನವ ಹಕ್ಕುಗಳ ಕಾರ್ಯಕರ್ತೆಯಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next