Advertisement
ಇತ್ತೀಚೆಗಷ್ಟೇ ಈ ಚಿತ್ರದ ಟೈಟಲ್ ಸಾಂಗನ್ನು ಕಿಚ್ಚ ಸುದೀಪ್ ಅವರು ಬಿಡುಗಡೆ ಮಾಡಿದ್ದರು. ಈ ಗೀತೆಗೆ ವಸಿಷ್ಠಸಿಂಹ ಹಾಗೂ ಹರಿಪ್ರಿಯ ದನಿಯಾಗಿದ್ದಾರೆ. ತೆಲುಗು ವರ್ಷನ್ನಲ್ಲಿ ನಟಿ ರೆಜಿನಾ ಅವರು ನಿರ್ವಹಿಸಿದ್ದ ಪಾತ್ರವನ್ನು, ಇಲ್ಲಿ ಹರಿಪ್ರಿಯಾ ಅವರು ಮಾಡಿದ್ದಾರೆ. ಹಿರಿಯ ನಟ ಅವಿನಾಶ್ ಕೂಡ ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಚಿತ್ರದಲ್ಲಿ ದಿಗಂತ್ ಕೂಡಾ ಪ್ರಮುಖ ಪಾತ್ರ ಮಾಡಿದ್ದಾರೆ.
Related Articles
Advertisement
ನಂತರ ವಸಿಷ್ಠ ಸಿಂಹ ಮಾತನಾಡಿ, “ನಿರ್ದೇಶಕ ಅಶೋಕ್ ತೇಜ ಅವರು ಬಂದು ನನಗೆ ಈ ಕಥೆಯನ್ನು ಹೇಳಿದಾಗ ತುಂಬಾ ಇಂಟರೆಸ್ಟಿಂಗ್ ಅನಿಸಿತು. ತೆಲುಗಿನ ಯವುಡು ಕಾದಂಬರಿ ಆಧಾರಿತ ಚಿತ್ರ. ಒಂದೊಳ್ಳೆಯ ಜರ್ನಿ ಕಥೆ ಇದರಲ್ಲಿದೆ. ಟೈಟಲ್ ಹಾಡಿಗೆ ನಾಗಾರ್ಜುನ ಶರ್ಮಾ ಸಾಹಿತ್ಯ ಬರೆದಿದ್ದಾರೆ. ಸಿನಿಮಾದಲ್ಲಿನ ಪಾತ್ರಗಳು, ಅವುಗಳ ತೊಳಲಾಟಗಳನ್ನು ಹೇಳುವ ಸಾಹಿತ್ಯವಿದು. ಈಗಾಗಲೇ ಚಿತ್ರವನ್ನು ನೋಡಿದ್ದು, ಖುಷಿಯಾಗಿದ್ದೇವೆ. ಇದರಲ್ಲಿ ಪ್ರೀತಿ, ಮೋಸ, ದ್ವೇಷ ಎಲ್ಲವೂ ಇದೆ’ ಎಂದು ಹೇಳಿದರು,
ನಾಯಕಿ ಹರಿಪ್ರಿಯಾ ಮಾತನಾಡಿ, “ಈ ಕಥೆ ಕೇಳಿದಾಗಲೇ ನನಗೆ ತುಂಬಾ ಇಷ್ಟವಾಗಿತ್ತು. ಸಿನಿಮಾ ನೋಡಿ ಮತ್ತಷ್ಟು ಖುಷಿ ಕೊಟ್ಟಿತು. ನಾನು ವಸಿಷ್ಠ, ದಿಗಂತ್ ಮೂರೂ ಜನ ಸ್ಪರ್ಧೆಗೆ ಬಿದ್ದವರಂತೆ ನಟಿಸಿದ್ದೇವೆ. ನನ್ನದು ಅಭಿನಯಕ್ಕೆ ಹೆಚ್ಚು ಅವಕಾಶ ಇರುವಂಥ ಪಾತ್ರ. ತುಂಬಾ ಚಾಲೆಂಜಿಂಗ್ ಕೂಡ ಆಗಿತ್ತು. ಸಿನಿಮಾನೂ ಕ್ಲಾಸ್ ಆಗಿ ಮೂಡಿಬಂದಿದ್ದು, ಪ್ರೇಕ್ಷಕರಿಗೆ ಕುತೂಹಲ ಕೆರಳಿಸುತ್ತಾ ಹೋಗುತ್ತದೆ’ ಎಂದರು.
ನಿರ್ಮಾಪಕ ರಾಜೇಶ್ ಅಗರ್‌ವಾಲ್ ಮಾತನಾಡುತ್ತಾ, “ನನ್ನ ನಿರ್ಮಾಣದ ಮೊದಲ ಕನ್ನಡ ಚಿತ್ರವಿದು. ಸಿನಿಮಾ ಮಾಡೋದು ನನ್ನ ಕನಸು. ಮೂಲ ಕಥೆಯಲ್ಲಿ ಸಾಕಷ್ಟು ಬದಲಾವಣೆ ಮಾಡಿಕೊಂಡು ಕನ್ನಡ ನೇಟಿವಿಟಿಗೆ ತಕ್ಕಂತೆ ಚಿತ್ರ ಮಾಡಿದ್ದೇವೆ. ದೊಡ್ಡ ಬಜೆಟ್‌ನಲ್ಲಿ ಒಳ್ಳೆಯ ಸಿನಿಮಾ ನಿರ್ಮಿಸಿದ್ದೇವೆ’ ಎಂದರು.
ಕೊಲೆಗಾರನನ್ನು ಪತ್ತೆ ಹಚ್ಚುವುದೇ ಚಿತ್ರದ ಕುತೂಹಲಕರ ಜರ್ನಿಯಾಗಿದೆ. ಚಿತ್ರದಲ್ಲಿ ಒಟ್ಟು 3 ಹಾಡುಗಳಿದ್ದು, ಶ್ರೀಚರಣ್ ಪಾಕಾಲ ಅವರ ಸಂಗೀತ ನಿರ್ದೇಶನವಿದೆ.