Advertisement

ಬಿಎಂಟಿಸಿ ಅಧ್ಯಕ್ಷರಾಗಿ ಹ್ಯಾರೀಸ್‌ ಅಧಿಕಾರ

07:09 AM Jan 12, 2019 | Team Udayavani |

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯ ನೂತನ ಅಧ್ಯಕ್ಷರಾಗಿ ಶುಕ್ರವಾರ ಶಾಸಕ ಎನ್‌.ಎ. ಹ್ಯಾರೀಸ್‌ ಅಧಿಕಾರ ಸ್ವೀಕರಿಸಿದರು. 

Advertisement

ಶಾಂತಿನಗರದಲ್ಲಿರುವ ಕೇಂದ್ರ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು, “ನಷ್ಟದಲ್ಲಿರುವ ಬಿಎಂಟಿಸಿಯನ್ನು ಲಾಭದತ್ತ ಕೊಂಡೊಯ್ಯುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗುವುದು. ಅದಕ್ಕಿಂತ ಹೆಚ್ಚಾಗಿ ನನಗೆ ಲಾಭ-ನಷ್ಟ ಮುಖ್ಯವಲ್ಲ. ಪ್ರಯಾಣಿಕರಿಗೆ ಉತ್ತಮ ಸಾರಿಗೆ ಸಂಪರ್ಕ ಕಲ್ಪಿಸುವುದು ಮೊದಲ ಆದ್ಯತೆ’ ಎಂದರು. 

ಬಿಎಂಟಿಸಿಯಲ್ಲಿ ತಂತ್ರಜ್ಞಾನ ಅಳವಡಿಕೆ ಹಾಗೂ “ನಮ್ಮ ಮೆಟ್ರೋ’ಗೆ ಪೂರಕವಾಗಿ ಬಿಎಂಟಿಸಿ ಸಂಪರ್ಕ ಸೇವೆ ಕಲ್ಪಿಸಲಾಗುವುದು. ಪ್ರತಿಯೊಬ್ಬರಿಗೂ ಬಿಎಂಟಿಸಿ ಜನಸ್ನೇಹಿಯನ್ನಾಗಿ ಮಾಡುತ್ತೇನೆ ಎಂದ ಅವರು, ಸುಮಾರು 45 ಲಕ್ಷ ಜನ ನಿತ್ಯ ಬಸ್‌ಗಳಲ್ಲಿ ಸಂಚರಿಸುತ್ತಾರೆ. ಅವರಿಗೆ ಉತ್ತಮ ಸಾರಿಗೆ ನೀಡುವುದು ನಮ್ಮ ಉದ್ದೇಶ ಎಂದು ಹೇಳಿದರು. 

ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಅಭಿನಂದಿಸಿದರು. ನಿಗಮದ ವ್ಯವಸ್ಥಾಪಕ ನಿರ್ದೇಶಕ ಪ್ರಸಾದ್‌ ಮತ್ತಿತರರು ಉಪಸ್ಥಿತರಿದ್ದರು. 

Advertisement

Udayavani is now on Telegram. Click here to join our channel and stay updated with the latest news.

Next