Advertisement

ಹ್ಯಾರಿಸ್‌ ಪುತ್ರನ ಸೆರೆ ವಿಫ‌ಲ: ತಲೆದಂಡ

06:05 AM Feb 19, 2018 | Team Udayavani |

ಬೆಂಗಳೂರು: ಮೊಹಮದ್‌ ನಲಪಾಡ್‌ ಹ್ಯಾರಿಸ್‌ನನ್ನು ಬಂಧಿಸುವಲ್ಲಿ ವಿಫ‌ಲವಾಗಿದ್ದರಿಂದ ಕಬ್ಬನ್‌ ಪಾರ್ಕ್‌ ಠಾಣೆ ಇನ್ಸ್‌ಪೆಕ್ಟರ್‌ ವಿಜಯ್‌ ಹಡಗಲಿ ಅವರನ್ನು ನಗರ ಪೊಲೀಸ್‌ ಆಯುಕ್ತ ಟಿ. ಸುನೀಲ್‌ಕುಮಾರ್‌ ಅಮಾನತುಗೊಳಿಸಿದ್ದಾರೆ.

Advertisement

ಕಬ್ಬನ್‌ ಪಾರ್ಕ್‌ ಠಾಣೆ ಪೊಲೀಸರು ಸಮರ್ಪಕವಾಗಿ ತನಿಖೆ ನಡೆಸದಿರು ವುದರಿಂದ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವಹಿಸಿ
ನಗರ ಪೊಲೀಸ್‌ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್‌ ಪಾರ್ಕ್‌ ವಿಭಾಗದ ಎಸಿಪಿಯನ್ನು ಕರ್ತವ್ಯ ಲೋಪದ ಅಡಿಯಲ್ಲಿ ನಗರ ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ ಕಾರ್ಯ ನಿರ್ವಹಿಸುವಂತೆ ಆದೇಶಿಸಲಾಗಿದೆ.

ಇಂದು ನ್ಯಾಯಾಲಯಕ್ಕೆ ಶರಣಾಗುವ ಸಾಧ್ಯತೆ?: ಈ ಮಧ್ಯೆ, ಮೊಹಮದ್‌ ನಲಪಾಡ್‌ ಹ್ಯಾರಿಸ್‌ ಸೋಮವಾರ ನ್ಯಾಯಾಲಯಕ್ಕೆ ಶರಣಾಗುವ ಸಾಧ್ಯತೆಯಿದೆ. ಭಾನುವಾರ ಪೊಲೀಸರ ಬಂಧನಕ್ಕೆ ಒಳಗಾದರೆ ಕಸ್ಟಡಿಯಲ್ಲಿರಬೇಕಾಗುತ್ತದೆ ಎಂಬ ಹಿನ್ನೆಲೆಯಲ್ಲಿ ನೇರವಾಗಿ ನ್ಯಾಯಾಲಯಕ್ಕೆ ಶರಣಾಗಿ ಜಾಮೀನು ಪಡೆದುಕೊಳ್ಳುವ ಸಿದಟಛಿತೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next