Advertisement

Kannada: ನಾಮಫ‌ಲಕದಲ್ಲಿ ಶೇ.60ರಷ್ಟು ಕನ್ನಡ ಬಳಸದಿದ್ದರೆ ಕಠಿನ ಕ್ರಮ: ಶಿವರಾಜ್‌ ತಂಗಡಗಿ 

09:40 PM Jan 06, 2024 | Team Udayavani |

ಬೆಂಗಳೂರು: ರಾಜ್ಯಾದ್ಯಂತ ಎಲ್ಲ ವ್ಯಾಪಾರ ಉದ್ದಿಮೆ, ಶಿಕ್ಷಣ ಸಂಸ್ಥೆ, ಅಂಗಡಿ ಮುಂಗಟ್ಟುಗಳ ನಾಮಫ‌ಲಕದಲ್ಲಿ ಶೇ.60ರಷ್ಟು ಕನ್ನಡ ಅಳವಡಿಕೆಗೆ ನಿಯಮ ರೂಪಿಸುವ ಸಂಬಂಧ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್‌ ತಂಗಡಗಿ ಅವರು ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ವಿಕಾಸಸೌಧದಲ್ಲಿ ಶನಿವಾರ ಸಭೆ ನಡೆಸಿದರು.

Advertisement

ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸುವ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಂಡ ಪ್ರಾಥಮಿಕವಾಗಿ ಸಚಿವರು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಕಠಿನ ನಿಯಮ ರೂಪಿಸುವ ಸಂಬಂಧ ಸಚಿವರು ಸಭೆಯಲ್ಲಿ ಕೈಗಾರಿಕೆ ಇಲಾಖೆ, ಗೃಹ ಇಲಾಖೆ ಹಾಗೂ ಕಾನೂನು ಇಲಾಖೆ ಅಧಿಕಾರಿಗಳ ಜತೆ ಸುದೀರ್ಘ‌ವಾಗಿ ಚರ್ಚಿಸಿದರು.

ಸಭೆ ಬಳಿಕ ಮಾತನಾಡಿದ ಅವರು, ಕೇವಲ ದಂಡ, ನೋಟಿಸ್‌ ನೀಡಿಕೆ ಮಾತ್ರವಲ್ಲ. ನಾಮಫ‌ಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಸದವರ ವಿರುದ್ಧ ಕಠಿನ ಕ್ರಮ ಕೈಗೊಳ್ಳುವಂತೆ ನಿಯಮ ಇರಲಿದೆ. ಮುಂದಿನ ಸಭೆ ಬಳಿಕ ಶೀಘ್ರವೇ ನಿಯಮಗಳ ಆದೇಶ ಹೊರಡಿಸಲಾಗುತ್ತದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next