Advertisement

ಹರ್ಷ ಕೊಲೆ ಪ್ರಕರಣ ಎನ್ಐಎಗೆ ವಹಿಸುವ ಬಗ್ಗೆ ಚಿಂತನೆ ಇದೆ : ಆರಗ ಜ್ಞಾನೇಂದ್ರ

04:54 PM Mar 24, 2022 | Team Udayavani |

ಬೆಂಗಳೂರು: ಶಿವಮೊಗ್ಗದ ಹರ್ಷ ಕೊಲೆ ಪ್ರಕರಣದ ತನಿಖೆಯನ್ನ ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸುವ ಬಗ್ಗೆ ಚಿಂತನೆ ಇದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಗುರುವಾರ ಹೇಳಿದ್ದಾರೆ.

Advertisement

ಸುದ್ದಿಗಾರರ ಜತೆ ಮಾತನಾಡಿದ ಅವರು, ಪೋಲಿಸ್ ವರದಿ ಬಂದ ನಂತರ ಆ ಬಗ್ಗೆ ಯೋಚಿಸುತ್ತೇವೆ.ನಾವು ಎನ್ಐಎ ತನಿಖೆಗೆ ವಹಿಸಿದರೆ ಅವರೇ ತನಿಖೆಯ ಸ್ವರೂಪ ನಿರ್ಧರಿಸುತ್ತಾರೆ ಎಂದು ತಿಳಿಸಿದರು.

ಗೃಹ ಇಲಾಖೆ ಮೂಲಗಳ ಪ್ರಕಾರ, ಪ್ರಕರರಣದ ಬಗ್ಗೆ ಎನ್‌ಐಎ ತನಿಖೆ ನಡೆಸುವ ಸಂಬಂಧ ಈಗಾಗಲೇ ಕೇಂದ್ರ ತನಿಖಾ ದಳದ ಹಿರಿಯ ಅಧಿಕಾರಿಗಳು ರಾಜ್ಯದ ಪೊಲೀಸರ ಜತೆಗೆ ಸಮನ್ವಯ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಫೆ.20 ರಂದು ಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷ ಕೊಲೆ ನಡೆದಿತ್ತು. ಪಿಎಫ್ ಐ ಕಾರ್ಯಕರ್ತರು ಈ ಕೃತ್ಯ ನಡೆಸಿದ್ದು, ಈ ಬಗ್ಗೆ ಎನ್ ಐಎ ತನಿಖೆ ನಡೆಸಬೇಕೆಂದು ಬಿಜೆಪಿ ನಾಯಕರು ಸರಕಾರಕ್ಕೆ ಒತ್ತಾಯಿಸಿದ್ದರು. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಎನ್ಐಎಗೆ ಪತ್ರ ಬರೆದಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next