Advertisement

ಸಾಗರಕ್ಕೆ ಬರುವ ಪ್ರವಾಸಿಗರಿಗೆ ಕೋವಿಡ್ ವರದಿ ಕಡ್ಡಾಯಕ್ಕೆ ಚಿಂತನೆ : ಹಾಲಪ್ಪ ಹರತಾಳು

04:06 PM Aug 01, 2021 | Team Udayavani |

ಸಾಗರ: ಕೊರೊನಾ ಮೂರನೇ ಅಲೆ ಬರುವ ಸಾಧ್ಯತೆ ಹಿನ್ನೆಲೆಯಲ್ಲಿ ಜೋಗ ಜಲಪಾತ ಸೇರಿದಂತೆ ತಾಲೂಕಿನ ಸಿಗಂದೂರು ಕ್ಷೇತ್ರ ಸೇರಿದಂತೆ ಧಾರ್ಮಿಕ ಸ್ಥಳ ಮತ್ತು ಪ್ರವಾಸಿ ತಾಣಗಳಿಗೆ ಬರುವ ಹೊರ ಜಿಲ್ಲೆ ಮತ್ತು ರಾಜ್ಯದ ಪ್ರವಾಸಿಗರು ಕೋವಿಡ್ ನೆಗಟಿವ್ ವರದಿ ಹೊಂದಿರಬೇಕು ಎಂಬ ನಿಯಮ ಜಾರಿಗೆ ತರಬೇಕಾಗಿದೆ ಎಂದು ಶಾಸಕ, ಎಂಎಸ್‌ಐಎಲ್ ಅಧ್ಯಕ್ಷ ಎಚ್.ಹಾಲಪ್ಪ ಹರತಾಳು ಅಭಿಪ್ರಾಯ ವ್ಯಕ್ತಪಡಿಸಿದರು.

Advertisement

ಇಲ್ಲಿನ ನಗರಸಭೆ ರಂಗಮಂದಿರದಲ್ಲಿ ಭಾನುವಾರ ಕೋವಿಡ್ ಸೇರಿದಂತೆ ನೆರೆಹಾನಿ ಕುರಿತು ಕರೆಯಲಾಗಿದ್ದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಈ ನಿಟ್ಟಿನಲ್ಲಿ ಸರ್ಕಾರದಿಂದ ಅಧಿಕೃತ ಮಾಹಿತಿ ಬಂದಿಲ್ಲ. ಜಿಲ್ಲಾಧಿಕಾರಿಗಳು ಮುಂಜಾಗ್ರತಾ ಕ್ರಮವಾಗಿ ಕೆಲವು ಕಾರ್ಯಸೂಚಿಯನ್ನು ಅಳವಡಿಸಿಕೊಳ್ಳಲು ಅವಕಾಶ ನೀಡಲಾಗಿದೆ. ಇದನ್ನು ಬಳಸಿಕೊಂಡು ತಾಲೂಕಿನ ಪ್ರವಾಸಿ ತಾಣಗಳ ಕುರಿತು ನಿಯಮ ರೂಪಿಸಬೇಕಿದೆ. ಪ್ರಮುಖವಾಗಿ ಕೋವಿಡ್ ಪರೀಕ್ಷೆಯನ್ನು ಹೆಚ್ಚು ಮಾಡುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ :ಮೀನು, ಕೋಳಿಗಿಂತ ಹೆಚ್ಚು ಗೋಮಾಂಸವನ್ನು ತಿನ್ನಬೇಕು ಎಂದ ಬಿಜೆಪಿ ಸಚಿವ!

Advertisement

Udayavani is now on Telegram. Click here to join our channel and stay updated with the latest news.

Next