Advertisement
ಆದರೆ ಇದೀಗ ಹರಿಯಾಣ ಅತಂತ್ರ ವಿಧಾನಸಭೆಯಾಗಿದೆ. ಬಿಜೆಪಿ 38 ಸ್ಥಾನಗಳಲ್ಲಿ, ಕಾಂಗ್ರೆಸ್ 33 ಹಾಗೂ ಜೆಜೆಪಿ 12 ಸ್ಥಾನಗಳಲ್ಲಿ ಜಯ ಸಾಧಿಸುವತ್ತ ಹೆಜ್ಜೆ ಇಟ್ಟಿವೆ. ಶೇ.40ರಷ್ಟು ಮತಎಣಿಕೆ ಮುಕ್ತಾಯಗೊಂಡಾಗ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿಗೆ ಸಾಕ್ಷಿಯಾಗಿತ್ತು.
Related Articles
Advertisement
ಮಹಾರಾಷ್ಟ್ರದ ಕೊಲ್ಹಾಪುರದ ಹತ್ತು ಕ್ಷೇತ್ರಗಳಲ್ಲಿ ಬಿಜೆಪಿಗೆ ಹೀನಾಯ ಸೋಲು ಅನುಭವಿಸಿದೆ. ಅಲ್ಲದೇ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಪ್ರವಾಹ ಪೀಡಿತ ಕ್ಷೇತ್ರಗಳಲ್ಲಿ ಬಿಜೆಪಿ ಪರಾಜಯಗೊಂಡಿದೆ. ಈ ನಿಟ್ಟಿನಲ್ಲಿ 2014ರ ಚುನಾವಣೆಯಲ್ಲಿ ಬಿಜೆಪಿ 122 ಸ್ಥಾನಗಳಲ್ಲಿ ಜಯ ಸಾಧಿಸಿತ್ತು. ಆದರೆ ಈ ಬಾರಿ ಚುನಾವಣೆಯಲ್ಲಿ ಬಿಜೆಪಿ ನೂರು ಸ್ಥಾನಗಳಲ್ಲಷ್ಟೇ ಗೆಲುವು ಪಡೆಯಲು ಯಶಸ್ವಿಯಾಗಿದೆ. ಚುನಾವಣೋತ್ತರ ಮತ್ತು ಮತದಾನೋತ್ತರ ಸಮೀಕ್ಷೆಗಳೆಲ್ಲವೂ ಮಹಾರಾಷ್ಟ್ರದಲ್ಲಿ ಬಿಜೆಪಿಯೇ 150ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಭವಿಷ್ಯ ನುಡಿದಿದ್ದವು.
ಆದರೆ ಈ ಬಾರಿ ಬಿಜೆಪಿ 100 ಸ್ಥಾನಗಳಲ್ಲಿ ಶಿವಸೇನಾ 58, ಕಾಂಗ್ರೆಸ್ 45, ಎನ್ ಸಿಪಿ 51 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಈ ಮೂಲಕ ಬಿಜೆಪಿ ಸ್ಪಷ್ಟ ಬಹುಮತ ಪಡೆಯಲಿದೆ ಎಂಬ ಭವಿಷ್ಯ ಹುಸಿಯಾಗಿದೆ.