Advertisement
ಹರಿಯಾಣದಲ್ಲಿ ವಿಧಾನಸಭಾ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳಾಗಬಹುದು ಎಂಬ ಊಹಾಪೋಹಗಳ ನಡುವೆ, ರಾಜಕೀಯದ ಮಹತ್ವದ ವಿದ್ಯಮಾನದಲ್ಲಿ ಪ್ರಖ್ಯಾತ ಕುಸ್ತಿಪಟುಗಳಾದ ವಿನೇಶ್ ಫೋಗಟ್(Vinesh Phogat) ಮತ್ತು ಬಜರಂಗ್ ಪುನಿಯಾ(Bajrang Punia) ರಾಹುಲ್ ಗಾಂಧಿ(Rahul Gandhi) ಅವರನ್ನು ಬುಧವಾರ(ಸೆ.4) ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
Related Articles
Advertisement
ವಿನೇಶ್ ಅವರನ್ನು ಬಿಜೆಪಿ ವಿರುದ್ಧ ಹೋರಾಟದ ಅಸ್ತ್ರವನ್ನಾಗಿಸಲು ಕಾಂಗ್ರೆಸ್ ಮುಂಚೂಣಿಯಲ್ಲಿ ನಿಲ್ಲಿಸಬಹುದು, ಮಾತ್ರವಲ್ಲದೆ ಆಕೆ ಒಲಂಪಿಕ್ ಪದಕ ಕಳೆದುಕೊಂಡ ಭಾವಾನಾತ್ಮಕ ವಿಚಾರವೂ ಪರಿಮಾಣಕಾರಿಯಾಗಿ ಕೆಲಸ ಮಾಡಬಹುದು ಎಂದು ಅಂದಾಜಿಸಲಾಗಿದೆ.
ಲೋಕಸಭೆ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟದ ಅಡಿಯಲ್ಲಿ ಮೈತ್ರಿ ಮಾಡಿಕೊಂಡಿದ್ದ ಕಾಂಗ್ರೆಸ್ ರಾಜ್ಯದ 10 ಲೋಕಸಭಾ ಕ್ಷೇತ್ರಗಳ ಪೈಕಿ ಒಂಬತ್ತರಲ್ಲಿ ಸ್ಪರ್ಧಿಸಿತ್ತು, ಕುರುಕ್ಷೇತ್ರವನ್ನು ಎಎಪಿಗೆ ಬಿಟ್ಟುಕೊಟ್ಟಿತ್ತು. 5 ರಲ್ಲಿ ಬಿಜೆಪಿ ಗೆದ್ದಿದ್ದರೆ, 5 ರಲ್ಲಿ ಕಾಂಗ್ರೆಸ್ ಗೆದ್ದು ಬಲ ಪ್ರದರ್ಶನ ಮಾಡಿತ್ತು. 90 ವಿಧಾನಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್ 42ರಲ್ಲಿ ಮೇಲುಗೈ ಸಾಧಿಸಿತ್ತು. ಎಎಪಿ ನಾಲ್ಕರಲ್ಲಿ ಮುನ್ನಡೆ ಸಾಧಿಸಿತ್ತು ಆದರೆ ಕ್ಷೇತ್ರ ಗೆಲ್ಲಲು ವಿಫಲವಾಗಿತ್ತು. ಈಗ ಮೈತ್ರಿ ಮಾತುಕತೆಗಳು ನಡೆಯುತ್ತಿದ್ದು ಏಳು ಸ್ಥಾನಗಳ ಬೇಡಿಕೆಯನ್ನು ಕಾಂಗ್ರೆಸ್ ಮುಂದೆ ಆಪ್ ಇಟ್ಟಿದೆ. 2019 ರಲ್ಲಿ ಬಿಜೆಪಿ 40 ಸ್ಥಾನಗಳಲ್ಲಿ ಜಯಗಳಿಸಿತ್ತು. ಬಹುಮತಕ್ಕೆ ಆರು ಸ್ಥಾನಗಳು ಕಡಿಮೆಯಾಗಿತ್ತು. ಆದರೂ ಸರಕಾರ ರಚಿಸುವಲ್ಲಿ ಯಶಸ್ವಿಯಾಗಿತ್ತು. ಕಾಂಗ್ರೆಸ್ 31 ಸ್ಥಾನ, ಜನನಾಯಕ ಜನತಾ ಪಕ್ಷ 10, ಪಕ್ಷೇತರರು 7 ಸ್ಥಾನ ಗೆದ್ದಿದ್ದರು. ಲೋಕದಳ 1, ಲೋಕ್ ಹಿತ್ ಪಾರ್ಟಿ 1 ಸ್ಥಾನಗಲ್ಲಿ ಜಯ ಸಾಧಿಸಿತ್ತು. ಬಿಜೆಪಿ ಜನನಾಯಕ ಜನತಾ ಪಾರ್ಟಿ ಮತ್ತು ಪಕ್ಷೇತರರು 7 ಶಾಸಕರ ಬೆಂಬಲದಿಂದ ಸುಲಭವಾಗಿ ಸರಕಾರ ರಚಿಸಿತ್ತು. ಮನೋಹರ್ ಲಾಲ್ ಖಟ್ಟರ್ ಮುಖ್ಯಮಂತ್ರಿ ಮತ್ತು ಜೆಜೆಪಿ ಅಧ್ಯಕ್ಷ ದುಷ್ಯಂತ್ ಚೌಟಾಲಾ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ಬಾರಿ ಚಿತ್ರಣ ಬದಲಾಗುವ ಸಾಧ್ಯತೆಗಳಿವೆ ಎಂದು ರಾಜಕೀಯ ಪಂಡಿತರು ಲೆಕ್ಕಾಚಾರ ಹಾಕಿಕೊಂಡಿದ್ದಾರೆ.ಈಗ ನಾಯಕತ್ವ ಬದಲಾಗಿದ್ದು ಬಿಜೆಪಿಯು ಸಿಎಂ ನಯಾಬ್ ಸಿಂಗ್ ಸೈನಿ ನಾಯಕತ್ವದಲ್ಲಿಯೇ ಚುನಾವಣೆ ಎದುರಿಸುತ್ತಿದ್ದು, ಅಭ್ಯರ್ಥಿಗಳ ಆಯ್ಕೆಯಲ್ಲಿ ಜಾಗರೂಕತೆ ಬಯಸುವ ಎಲ್ಲ ಸಾಧ್ಯತೆಗಳಿವೆ. ಇದಕ್ಕೆ ಕಾರಣ ಲೋಕಸಭಾ ಚುನಾವಣೆಯಲ್ಲಿ ಆದ ಹಿನ್ನಡೆ. ಪಕ್ಷಾಂತರ ಪರ್ವ ಜೋರು ಲೋಕಸಭೆ ಚುನಾವಣೆಗೆ ಮುನ್ನ ಜೆಜೆಪಿಯೊಂದಿಗಿನ ಮೈತ್ರಿ ಮುರಿದುಕೊಂಡಿದ್ದ ಜೆಜೆಪಿ ಪ್ರತ್ಯೇಕವಾಗಿ ಹೋರಾಟಕ್ಕೆ ಸಿದ್ಧವಾಗಿದೆ. ಈ ನಡುವೆ ಮೂವರು ಜೆಜೆಪಿ ಶಾಸಕರು, ಪ್ರಮುಖ ನಾಯಕ ನಾಯಕ ದೇವೆಂದರ್ ಸಿಂಗ್ ಬಬ್ಲಿ ಅವರೊಂದಿಗೆ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಮೂವರೂ ಜಾಟ್ ಸಮುದಾಯದ ನಾಯಕರೆನ್ನುವುದು ವಿಶೇಷ. ಇನ್ನೂ ಕೆಲವರು ಪಕ್ಷಾಂತರಕ್ಕೆ ಸಿದ್ಧವಾಗಿದ್ದಾರೆ ಎಂದು ಹೇಳಲಾಗಿದೆ.