Advertisement

Haryana;ಭಾರತ್‌ ಜೋಡೋ ಮಾದರಿ ಪ್ರಚಾರ ಇಂದು ಶುರು?

01:17 AM Sep 30, 2024 | Team Udayavani |

ಚಂಡೀಗಢ: ಅ.5ರಂದು ನಡೆಯಲಿರುವ ಹರಿಯಾಣ ವಿಧಾನಸಭೆ ಚುನಾವಣೆಗಾಗಿ ಪ್ರಚಾರ ಬಿರುಸುಗೊಳಿಸಲು ಕಾಂಗ್ರೆಸ್‌ ತೀರ್ಮಾನಿಸಿದೆ. ಈ ಹಿನ್ನೆಲೆಯಲ್ಲಿ ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಸೋಮವಾರದಿಂದ ಅ.3ರ ವರೆಗೆ ವಿವಿಧ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಲಿದ್ದಾರೆ. ಭಾರತ್‌ ಜೋಡೋ ಮಾದರಿಯಲ್ಲಿ ನಡೆಯಲಿರುವ ಈ ಯಾತ್ರೆಗೆ ಹರಿಯಾಣದ ನಾರಾಯಣಗಢದಲ್ಲಿ ಚಾಲನೆ ನೀಡಲಾಗುತ್ತದೆ. ಮುಲಾನಾ, ರಾದೌರ್‌, ಲಾಡವಾ, ಸಡೌರಾ, ಪಿಪಲೀ, ಕುರುಕ್ಷೇತ್ರಗಳಲ್ಲಿ ಯಾತ್ರೆ ನಡೆಯಲಿದೆ ಎನ್ನಲಾಗಿದೆ. ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಕೂಡ ಭಾಗಿಯಾಗುವ ಸಾಧ್ಯತೆ ಇದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next