Advertisement

ಕೋವಿಡ್ ಭೀತಿ : ಹರಿಯಾಣದಲ್ಲೂ 10ನೇ ತರಗತಿ ಪರೀಕ್ಷೆ ರದ್ದು

04:47 PM Apr 15, 2021 | Team Udayavani |

ಚಂಡೀಗಢ : ಪಂಜಾಬ್ ನಂತರ ಇದೀಗ ಹರಿಯಾಣದ ಸರ್ಕಾರ ಸಹ 10ನೇ ತರಗತಿಯ ಪರೀಕ್ಷೆಗಳನ್ನು ರದ್ದು ಮಾಡಿದೆ. ಹಾಗೂ 12 ನೇ ತರಗತಿಯ ಪರೀಕ್ಷೆಗಳನ್ನು ಮುಂದೂಡಿದೆ.

Advertisement

ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ ಹಿನ್ನೆಲೆ ಇಂದು ಆದೇಶ ಹೊರಡಿಸಿರುವ ಹರಿಯಾಣದ ಸರ್ಕಾರ, ಪ್ರಸಕ್ತ ಶೈಕ್ಷಣಿಕ ವರ್ಷದ 10ನೇ ತರಗತಿಯ ಪರೀಕ್ಷೆಗಳನ್ನು ರದ್ದು ಮಾಡಲಾಗಿದ್ದು, 12 ನೇ ತರಗತಿಯ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ತಿಳಿಸಿದೆ.

ಈ ಬಗ್ಗೆ ಮಾತನಾಡಿರುವ ಹರಿಯಾಣದ ಶಿಕ್ಷಣ ಸಚಿವ ಕನ್ವಾರ್ ಪಾಲ್, ಕೇಂದ್ರ ಸರ್ಕಾರ ಸಿಬಿಎಸ್‍ಇ 10th  ಪರೀಕ್ಷೆಗಳನ್ನು ರದ್ದು ಪಡಿಸಿದ ಬೆನ್ನಲ್ಲೆ ನಾವು ಕೂಡ ಈ ಬಗ್ಗೆ ಚಿಂತನೆ ಕೈಗೊಂಡೆವು. ಇದೀಗ ತಜ್ಞರ ಜೊತೆ ಚರ್ಚಿಸಿ ಅಂತಿಮ ನಿರ್ಧಾರ ಪ್ರಕಟಿಸಿದ್ದೇವೆ. ಆಂತರಿಕ ಮೌಲ್ಯಮಾಪನದ ಮೂಲಕ ಹತ್ತನೇ ತರಗತಿಯ ವಿದ್ಯಾರ್ಥಿಗಳನ್ನು ಪರೀಕ್ಷೆ ರಹಿತವಾಗಿ ಪಾಸ್ ಮಾಡುತ್ತೇವೆ ಎಂದಿದ್ದಾರೆ.

ಇನ್ನು ನಿನ್ನೆಯಷ್ಟೆ ಸಿಬಿಎಸ್‍ಇ 10 ನೇ ತರಗತಿಯ ಪರೀಕ್ಷೆಗಳನ್ನು ರದ್ದು ಪಡಿಸಿದ್ದು ಹಾಗೂ 12 ನೇ ತರಗತಿಯ ಪರೀಕ್ಷೆಗಳನ್ನು ಮುಂದೂಡಿ ಆದೇಶ ಹೊರಡಿಸಲಾಗಿದೆ. ಇದರ ಬೆನ್ನಲ್ಲೆ ಇಂದು (ಏಪ್ರಿಲ್ 15) ಪಂಜಾಬ್ ಸರ್ಕಾರ ಕೂಡ 5,8 ಹಾಗೂ 10ನೇ ತರಗತಿಯ ಪರೀಕ್ಷೆಗಳನ್ನು ಸಂಪೂರ್ಣ ರದ್ದು ಮಾಡಿ ಆದೇಶ ಹೊರಡಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next