Advertisement

Shocking: ಕುಟುಂಬ ಸದಸ್ಯರ ಎದುರೇ 3 ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ದರೋಡೆ

09:07 AM Sep 22, 2023 | Team Udayavani |

ಚಂಡೀಗಢ: ಮೂವರು ಮಹಿಳೆಯರ ಮೇಲೆ ನಾಲ್ವರು ಅಪರಿಚಿತ ವ್ಯಕ್ತಿಗಳು ಅವರ ಕುಟುಂಬದ ಸದಸ್ಯರ ಎದುರೇ ಅತ್ಯಾಚಾರವೆಸಗಿರುವ ಘೋರ ದುರಂತ ಹರಿಯಾಣದ ಪಾಣಿಪತ್‌ನಲ್ಲಿ ನಡೆದಿರುವುದಾಗಿ ಪೋಲಿಸರು ತಿಳಿಸಿದ್ದಾರೆ.

Advertisement

ಘಟನೆ ಬುಧವಾರ ತಡರಾತ್ರಿ ನಡೆದಿದ್ದು, ಆರೋಪಿಗಳು ಚಾಕು ಮತ್ತು ಇತರ ಹರಿತವಾದ ಆಯುಧಗಳಿಂದ ಶಸ್ತ್ರಸಜ್ಜಿತರಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ವಿವರ: ಬುಧವಾರ ತಡ ರಾತ್ರಿ ನಾಲ್ವರು ಮುಸುಕುಧಾರಿಗಳ ತಂಡವೊಂದು ಏಕಾಏಕಿ ಮನೆಯೊಳಗೆ ನುಗ್ಗಿ ಮನೆಯೊಳಗಿದ್ದ ಸದಸ್ಯರನ್ನು ಒಂದು ಕೊನೆಯಲ್ಲಿ ಕೂಡಿ ಹಾಕಿ ಬಳಿಕ ಮನೆಯಲ್ಲಿದ್ದ ಮೂವರು ಮಹಿಳೆಯರನ್ನು ಚಾಕು ತೋರಿಸಿ ಅತ್ಯಾಚಾರವೆಸಗಿದ್ದಾರೆ ಬಳಿಕ ಮನೆಯೊಳಗಿದ್ದ ನಗ ನಗದು ದೋಚಿ ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಅಪರಿಚಿತರು ಮುಖಕ್ಕೆ ಬಟ್ಟೆಗಳನ್ನು ಕಟ್ಟಿಕೊಂಡು ಬಂದಿದ್ದು ಗುರುತು ಹಿಡಿಯಲು ಸಾಧ್ಯವಾಗಲಿಲ್ಲ ಎಂದು ಕುಟುಂಬ ಸದಸ್ಯರು ಹೇಳಿಕೊಂಡಿದ್ದಾರೆ.

ಇನ್ನೊಂದೆಡೆ ಪೊಲೀಸರ ಹೇಳಿಕೆಯಂತೆ ಸಾಮೂಹಿಕ ಅತ್ಯಾಚಾರ ಸಂಭವಿಸಿದ ಸ್ಥಳದಿಂದ ಸುಮಾರು ಒಂದು ಕಿಮೀ ದೂರದಲ್ಲಿ ಬುಧವಾರ ತಡರಾತ್ರಿ ನಡೆದ ಪ್ರತ್ಯೇಕ ಘಟನೆಯಲ್ಲಿ, ಮಹಿಳೆಯ ಮೇಲೆ ದಾಳಿ ಮಾಡಿ ಆಕೆಯ ಮನೆಯಲ್ಲಿದ್ದ ಚಿನ್ನ ಹಾಗೂ ನಗದು ದರೋಡೆ ಮಾಡಲಾಗಿದ್ದು ಗಂಭೀರ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಮೂಲಗಳ ಪ್ರಕಾರ ಎರಡು ಪ್ರಕರಣಗಳಲ್ಲೂ ಒಂದೇ ಗುಂಪಿನ ಕೈವಾಡ ಇರುವ ಸಾಧ್ಯತೆ ಇರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

Advertisement

ಸದ್ಯ ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಬಲೆ ಬಿಸಿದ್ದಾರೆ.

ಇದನ್ನೂ ಓದಿ: Women’s Bill Passes… ಪ್ರಧಾನಿ ಮೋದಿಗೆ ‘ನಾರಿ ಶಕ್ತಿ’ಯಿಂದ ಅಭಿನಂದನೆಗಳ ಮಹಾಪೂರ

Advertisement

Udayavani is now on Telegram. Click here to join our channel and stay updated with the latest news.

Next