ಚಂಡೀಗಢ್: ಕೋವಿಡ್ 19 ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಗುರುಗ್ರಾಮ್, ಫರಿದಾಬಾದ್ ಹಿಸಾರ್, ಪಂಚಕುಲಾ ಮತ್ತು ಸೋನಿಪತ್ ಜಿಲ್ಲೆಗಳಲ್ಲಿ ಜಾರಿಗೊಳಿಸಿದ್ದ ಸೆಕ್ಷನ್ 144 ಅನ್ನು ಬುಧವಾರ(ಏಪ್ರಿಲ್ 28)ದಿಂದ ರಾಜ್ಯಾದ್ಯಂತ ವಿಸ್ತರಿಸಿರುವುದಾಗಿ ಹರ್ಯಾಣ ಸರಕಾರ ಘೋಷಿಸಿದೆ.
ಇದನ್ನೂ ಓದಿ:ಪುಟ್ಟಣ್ಣ ಕಣಗಾಲ್ ಪುತ್ರ ರಾಮು ಕಣಗಾಲ್ ಕೋವಿಡ್ ಗೆ ಬಲಿ
ಭಾರತೀಯ ಅಪರಾಧ ದಂಡ ಸಂಹಿತೆ ಸೆಕ್ಷನ್ 144 ಅನ್ನು ರಾಜ್ಯಾದ್ಯಂತ ಜಾರಿಗೊಳಿಸಲಾಗಿದ್ದು, ಜನರು ಗುಂಪುಗೂಡುವುದಾಗಲಿ ಅಥವಾ ನಾಲ್ಕು ಜನರಿಗಿಂತ ಹೆಚ್ಚು ಜನರು ಸೇರುವುದನ್ನು ನಿಷೇಧಿಸಲಾಗಿದೆ ಎಂದು ಹರ್ಯಾಣ ಸರಕಾರ ಆದೇಶದಲ್ಲಿ ತಿಳಿಸಿದೆ.
ಹರ್ಯಾಣ ಗೃಹ ಮತ್ತು ಆರೋಗ್ಯ ಸಚಿವ ಅನಿಲ್ ವಿಜ್ ಅವರು, ರಾಜ್ಯದಲ್ಲಿರುವ ಎಲ್ಲಾ ಖಾಸಗಿ ಮತ್ತು ಸರಕಾರಿ ಆಸ್ಪತ್ರೆಗಳಿಗೆ ಒದಗಿಸಬೇಕಾಗಿರುವ ಆಕ್ಸಿಜನ್, ಬೆಡ್ಸ್, ಆಕ್ಸಿಜನ್ ದಾಸ್ತಾನು ಸಾಮರ್ಥ್ಯದ ಬಗ್ಗೆ ಬ್ಲೂಪ್ರಿಂಟ್ ಒದಗಿಸುವಂತೆ ಜಿಲ್ಲೆಯ ಎಲ್ಲಾ ಡೆಪ್ಯುಟಿ ಕಮಿಷನರ್ ಗಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ.
ಕೋವಿಡ್ ಸೋಂಕು ತಡೆಯಲು ಮುಂಜಾಗ್ರತಾ ಕ್ರಮವಾಗಿ ರಾಜ್ಯಾದ್ಯಂತ ಕಠಿಣ ನಿರ್ಬಂಧ ಜಾರಿಗೊಳಿಸಿದ್ದು, ಅದರಂತೆ ತುರ್ತು ಸೇವೆಯನ್ನು ಹೊರತುಪಡಿಸಿ ಉಳಿದೆಲ್ಲಾ ಅಂಗಡಿ, ಮುಂಗಟ್ಟುಗಳು ನಿಗದಿಪಡಿಸಿದ ಸಮಯದಲ್ಲಿ ಬಂದ್ ಮಾಡುವಂತೆ ಅನಿಲ್ ವಿಜ್ ತಿಳಿಸಿದ್ದಾರೆ.