ಪ್ರಮಾಣ ವಚನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗಿಯಾಗಲಿದ್ದಾರೆ ಎನ್ನಲಾಗಿದೆ.
Advertisement
ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರು ಹೊಸ ಸರ್ಕಾರದ ಸಚಿವರಿಗೆ ಪ್ರಮಾಣ ವಚನ ಬೋಧಿಸಲಿದ್ದು. ಗುರುವಾರ (ಅ.17) ರಂದು ಪಂಚಕುಲದ ದಸರಾ ಮೈದಾನದಲ್ಲಿ ಬೆಳಗ್ಗೆ 10:00 ಗಂಟೆಗೆ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎನ್ನಲಾಗಿದೆ.
ಪ್ರಧಾನಿ ಮೋದಿ, ಬಿಜೆಪಿ ಆಡಳಿತವಿರುವ ಇತರ ರಾಜ್ಯಗಳ ಮುಖ್ಯಮಂತ್ರಿಗಳು ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಅವರ ಜೊತೆಗೆ ಪಕ್ಷದ ಹಿರಿಯ ನಾಯಕರೂ ಸಮಾರಂಭದಲ್ಲಿ ಉಪಸ್ಥಿತರಿರುತ್ತಾರೆ. ಏತನ್ಮಧ್ಯೆ, ಪರೇಡ್ ಮೈದಾನದಲ್ಲಿ ಸಮಾರಂಭಕ್ಕೆ ಸಿದ್ಧತೆಗಳು ನಡೆಯುತ್ತಿವೆ. “ನಾವು ಕಾರ್ಯಕ್ರಮಕ್ಕಾಗಿ ಸ್ಥಳವನ್ನು ಸಿದ್ಧಪಡಿಸುತ್ತಿದ್ದೇವೆ” ಎಂದು ಪಂಚಕುಲದ ಉಪ ಆಯುಕ್ತ (ಡಿಸಿ) ಡಾ. ಯಶ್ ಗಾರ್ಗ್ ಟ್ವೀಟ್ ಮಾಡಿದ್ದಾರೆ. ಪ್ರಮಾಣ ವಚನ ಸಮಾರಂಭಕ್ಕೆ ಅಗತ್ಯ ವ್ಯವಸ್ಥೆ ಕಲ್ಪಿಸಲು ಡಿಸಿ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಸಮಿತಿಯನ್ನೂ ರಚಿಸಲಾಗಿದೆ. ಬಿಜೆಪಿ ತನ್ನ ಚುನಾವಣಾ ಪ್ರಚಾರದ ಸಮಯದಲ್ಲಿ, ನಯಾಬ್ ಸಿಂಗ್ ಸೈನಿ ಅವರು ಮತ್ತೆ ಅಧಿಕಾರಕ್ಕೆ ಬಂದರೆ ಉನ್ನತ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ ಎಂದು ಹೇಳಲಾಗಿತ್ತು. ಇದೀಗ ಹರಿಯಾಣದಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸಿದ ಭಾರತೀಯ ಜನತಾ ಪಕ್ಷವು(ಬಿಜೆಪಿ) ತನ್ನ ಮೂರನೇ ಇನ್ನಿಂಗ್ಸ್‌ಗೆ ಸಿದ್ಧವಾಗಿದೆ. ಅದರಂತೆ ನಯಾಬ್ ಸಿಂಗ್ ಸೈನಿ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
Related Articles
Advertisement