Advertisement

Hasanamba Jatra Mahotsav: ಹಾಸನಾಂಬ ಜಾತ್ರಾ ಮಹೋತ್ಸವ ಸಿದ್ಧತೆ ಪರಿಶೀಲನೆ

04:33 PM Oct 07, 2023 | Team Udayavani |

ಹಾಸನ: ಶ್ರೀ ಹಾಸನಾಂಬ ಜಾತ್ರಾ ಮಹೋತ್ಸವ ನ.2 ರಿಂದ ಆರಂಭವಾಗಲಿದ್ದು, ಜಾತ್ರೆಯನ್ನು ಯಶಸ್ವಿ ಯಾಗಿ ನಿರ್ವಹಿಸಲು ಪ್ರತಿಯೊಬ್ಬ ಅಧಿಕಾರಿ ಮತ್ತು ಸಿಬ್ಬಂದಿ ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಸತ್ಯಭಾಮ ಸೂಚಿಸಿದರು.

Advertisement

ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಶ್ರೀ ಹಾಸನಾಂಬ ಜಾತ್ರಾ ಮಹೊತ್ಸವದ ಪೂರ್ವ ಸಿದ್ಧತೆಯ ಸಭೆಯಲ್ಲಿ ಮಾತನಾಡಿದ ಅವರು, ಶಕ್ತಿ ಯೋಜನೆ ಜಾರಿಯಲ್ಲಿರುವ ಕಾರಣ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ನಿರೀಕ್ಷೆ ಇದೆ. ಅಗತ್ಯ ಮೂಲ ಸೌಲಭ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.

8 ಕಡೆ ಶೌಚಾಲಯ ವ್ಯವಸ್ಥೆ: ದೇವರ ದರ್ಶನಕ್ಕೆ ಆಗಮಿಸುವ ಸಾರ್ವಜನಿಕರ ಅನುಕೂಲಕ್ಕಾಗಿ ಕುಡಿ ಯುವ ನೀರು ಒದಗಿಸಲು ಕ್ರಮ ಕೈಗೊಳ್ಳಬೇಕು. 8 ಕಡೆ ಗಳಲ್ಲಿ 50 ತಾತ್ಕಾಲಿಕವಾಗಿ ನಿರ್ಮಿಸುವ ಶೌಚಾಲಯಗಳ ಸ್ವತ್ಛತೆಗೆ ಗಮನಹರಿಸಬೇಕೆಂದರು.

ನೇರ ಪ್ರಸಾರಕ್ಕೆ ವ್ಯವಸ್ಥೆ: ಆಹ್ವಾನ ಪತ್ರಿಕೆ, ಪೂಜಾ ವೇಳಾಪಟ್ಟಿ, ಲಾಡು ಪ್ರಸಾದ, ದೀಪಾ ಲಂಕಾರ, ಪ್ರಸಾದ ವಿತರಣೆ, ಹೂವಿನ ಅಲಂ ಕಾರ, ಬ್ಯಾರಿ ಕೇಡ್‌, ಸಿಸಿ ಟಿವಿ ಅಳವಡಿಕೆ, ವಾಹನಗಳ ಪಾರ್ಕಿಂಗ್‌ ವ್ಯವಸ್ಥೆ, ಆಗ್ನಿಶಾಮಕ ವಾಹನ ಹಾಗೂ ಆ್ಯಂಬುಲೆನ್ಸ್‌ ವ್ಯವಸ್ಥೆ, ದೇವರ ಪೂಜೆ ಯನ್ನು ಸಾರ್ವಜನಿಕರು ವೀಕ್ಷಣೆ ಮಾಡಲು ಅನುಕೂಲ ವಾಗುವಂತೆ ನೇರ ಪ್ರಸಾರಕ್ಕೆ ಎಲ್‌ ಇಡಿ ಪರದೆ ವ್ಯವಸ್ಥೆ, ಜಾತ್ರಾ ಸಂದರ್ಭದಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಗುರುತಿನ ಚೀಟಿ ವಿತರಣೆ ಮಾಡಬೇಕು ಎಂದರು.

ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಬಿ.ಆರ್‌.ಪೂರ್ಣಿಮಾ, ಅಪರ ಜಿಲ್ಲಾಧಿಕಾರಿ ಕೆ.ಟಿ.ಶಾಂತಲಾ, ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ತಮ್ಮಯ್ಯ, ಉಪ ವಿಭಾಗಾಧಿಕಾರಿ ಮಾರುತಿ ಮತ್ತಿತರ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

Advertisement

ಸಭೆ ನಂತರ ಜಿಲ್ಲಾಧಿಕಾರಿ ಸತ್ಯಭಾಮ ಅವರು ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲಿಸಿ ಅಗತ್ಯ ಸಿದ್ಧತೆಗೆ ಕ್ರಮ ಕೈಗೊಳ್ಳುವಂತೆ ಸಲಹೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಎಸ್ಪಿ ಮೊಹಮ್ಮದ್‌ ಸುಜೀತ, ಅಪರ ಜಿಲ್ಲಾಧಿಕಾರಿ ಕೆ.ಟಿ.ಶಾಂತಲಾ, ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ತಮ್ಮಯ್ಯ, ಉಪ ಭಾಗಾಧಿಕಾರಿ ಮಾರುತಿ ಮತ್ತಿತರ ಅಧಿಕಾರಿಗಳು ಹಾಜರಿದ್ದರು.

ರೂಟ್‌ ಮ್ಯಾಪ್‌ ತಯಾರಿಸಲು ಸೂಚನೆ: ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮೊಹಮ್ಮದ್‌ ಸುಜೀತ ಅವರು ಮಾತನಾಡಿ ಬಂದೋಬಸ್ತ್ಗೆ ಸಂಬಂಧಿಸಿದಂತೆ ರೂಟ್‌ ಮ್ಯಾಪ್‌ ತಯಾರಿಸಿಕೊಂಡು ಅಗತ್ಯ ಸಿದ್ದತೆ ಮಾಡಿಕೊಳ್ಳುವಂತೆ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.

ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ ಎಂದರು. ದೇವರ ದರ್ಶನಕ್ಕಾಗಿ ವಿತರಿಸುವ 300 ರೂ.1000 ಪಾಸ್‌ ಹಾಗೂ ವಿಐಪಿ ಪಾಸ್‌ಗಳಿಗೆ ಬಾರ್‌ ಕೋಡ್‌ ಅಳವಡಿಸಲಾಗು ವುದು. ಈ ಪಾಸ್‌ ಗಳನ್ನು ಸ್ಕ್ಯಾನ್‌ ಮಾಡಿದ ನಂತರ ಪ್ರವೇಶ ಕಲ್ಪಿಸಲಾಗುವುದು. -ಸತ್ಯಭಾಮ, ಜಿಲ್ಲಾಧಿಕಾರಿ

Advertisement

Udayavani is now on Telegram. Click here to join our channel and stay updated with the latest news.

Next