Advertisement
ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಶ್ರೀ ಹಾಸನಾಂಬ ಜಾತ್ರಾ ಮಹೊತ್ಸವದ ಪೂರ್ವ ಸಿದ್ಧತೆಯ ಸಭೆಯಲ್ಲಿ ಮಾತನಾಡಿದ ಅವರು, ಶಕ್ತಿ ಯೋಜನೆ ಜಾರಿಯಲ್ಲಿರುವ ಕಾರಣ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ನಿರೀಕ್ಷೆ ಇದೆ. ಅಗತ್ಯ ಮೂಲ ಸೌಲಭ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.
Related Articles
Advertisement
ಸಭೆ ನಂತರ ಜಿಲ್ಲಾಧಿಕಾರಿ ಸತ್ಯಭಾಮ ಅವರು ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲಿಸಿ ಅಗತ್ಯ ಸಿದ್ಧತೆಗೆ ಕ್ರಮ ಕೈಗೊಳ್ಳುವಂತೆ ಸಲಹೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಎಸ್ಪಿ ಮೊಹಮ್ಮದ್ ಸುಜೀತ, ಅಪರ ಜಿಲ್ಲಾಧಿಕಾರಿ ಕೆ.ಟಿ.ಶಾಂತಲಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತಮ್ಮಯ್ಯ, ಉಪ ಭಾಗಾಧಿಕಾರಿ ಮಾರುತಿ ಮತ್ತಿತರ ಅಧಿಕಾರಿಗಳು ಹಾಜರಿದ್ದರು.
ರೂಟ್ ಮ್ಯಾಪ್ ತಯಾರಿಸಲು ಸೂಚನೆ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತ ಅವರು ಮಾತನಾಡಿ ಬಂದೋಬಸ್ತ್ಗೆ ಸಂಬಂಧಿಸಿದಂತೆ ರೂಟ್ ಮ್ಯಾಪ್ ತಯಾರಿಸಿಕೊಂಡು ಅಗತ್ಯ ಸಿದ್ದತೆ ಮಾಡಿಕೊಳ್ಳುವಂತೆ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.
ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ ಎಂದರು. ದೇವರ ದರ್ಶನಕ್ಕಾಗಿ ವಿತರಿಸುವ 300 ರೂ.1000 ಪಾಸ್ ಹಾಗೂ ವಿಐಪಿ ಪಾಸ್‌ಗಳಿಗೆ ಬಾರ್ ಕೋಡ್ ಅಳವಡಿಸಲಾಗು ವುದು. ಈ ಪಾಸ್ ಗಳನ್ನು ಸ್ಕ್ಯಾನ್ ಮಾಡಿದ ನಂತರ ಪ್ರವೇಶ ಕಲ್ಪಿಸಲಾಗುವುದು. -ಸತ್ಯಭಾಮ, ಜಿಲ್ಲಾಧಿಕಾರಿ