Advertisement

Mangaluru; ನಾಲ್ಯಪದವು ಶಾಲೆಗೆ ಹಸಿರು ನೈರ್ಮಲ್ಯ ಶಾಲಾ ಅಭ್ಯುದಯ ಪ್ರಶಸ್ತಿ

05:49 PM Jul 30, 2024 | Team Udayavani |

ಮಂಗಳೂರು: ಮುದ್ದೇನಹಳ್ಳಿ ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ಇವರ ಕರ್ನಾಟಕ ರಾಜ್ಯದಲ್ಲಿ ಸರಕಾರಿ ಶಾಲೆಗಳಿಗೆ “ಹಸಿರು ನೈರ್ಮಲ್ಯ ಶಾಲಾ ಅಭ್ಯುದಯ ಪ್ರಶಸ್ತಿ 2024” ಗಾಗಿ ಅರ್ಜಿಗಳನ್ನು ಆಹ್ವಾನಿಸಿದ್ದು, ಇದಕ್ಕಾಗಿ ಮಚ್ಚಿನ ಕುವೆಂಪು ಶತಮಾನೋತ್ಸವ ಉನ್ನತೀಕರಿಸಿದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ, ನಾಲ್ಯಪದವು ಶಾಲೆ ಆಯ್ಕೆಯಾಗಿದೆ

Advertisement

ಜು.27 ರಂದು ಚಿಕ್ಕಬಳ್ಳಾಪುರ ಜಿಲ್ಲೆಯ ಸತ್ಯಸಾಯಿ ಗ್ರಾಮದಲ್ಲಿ ಜರುಗಿದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಸದ್ಗುರು ಶ್ರೀ ಮಧುಸೂದನ ಸಾಯಿ ಅವರಿಂದ ಈ ಪ್ರಶಸ್ತಿಯನ್ನು ಶಾಲಾ ಮುಖ್ಯ ಶಿಕ್ಷಕಿ ದಾಕ್ಷಾಯಣಮ್ಮ ಎಸ್ ಸ್ವೀಕರಿಸಿದರು.

ಪ್ರಶಸ್ತಿಯು ರೂಪಾಯಿ ಹತ್ತು ಸಾವಿರ ನಗದು ಪುರಸ್ಕಾರವನ್ನು ಹೊಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next