Advertisement

Hassan; ಟ್ರಕ್ ಕಾರು ನಡುವೆ ಭೀಕರ ಅಪಘಾತ; ಸ್ಥಳದಲ್ಲೇ ಕೊನೆಯುಸಿರೆಳೆದ ಆರು ಜನರು

09:06 AM May 26, 2024 | Team Udayavani |

ಹಾಸನ: ಟೊಯೋಟಾ ಇಟಿಯೋಸ್ ಕಾರು ಎರಡು ಲಾರಿಗಳ ನಡುವೆ ಸಿಲುಕಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮಹಿಳೆಯರು, ಮೂವರು ಪುರುಷರು, ಒಂದು ಮಗು ಸೇರಿ ಕಾರಿನಲ್ಲಿದ್ದ ಒಂದೇ ಕುಟುಂಬದ ಎಲ್ಲ ಆರು ಜನರೂ ಸ್ಥಳದಲ್ಲೇ ಮೃತರಾದ ದಾರುಣ ಘಟನೆ ನಗರ ಹೊರವಲಯದ ರಾಷ್ಟ್ರೀಯ ಹೆದ್ದಾರಿ 75ರ ಕಂದಲಿ ಸಮೀಪ ಭಾನುವಾರ ಮುಂಜಾನೆ ಸಂಭವಿಸಿದೆ.

Advertisement

ನಾರಾಯಣಪ್ಪ, ಸುನಂದಾ, ರವಿಕುಮಾರ್, ನೇತ್ರ, ಚೇತನ್ (ಬಾಲಕ), ರಾಕೇಶ್ (ಡ್ರೈವರ್) ಮೃತರು. ಎಲ್ಲರೂ ಹೊಸಕೋಟೆ ತಾಲ್ಲೂಕಿನ, ಅಂದರಹಳ್ಳಿ ಹಾಗೂ ದೇವನಹಳ್ಳಿ ಬಳಿಯ ಕಾರಹಳ್ಳಿ ಗ್ರಾಮದವರು ಎಂದು ತಿಳಿದು ಬಂದಿದೆ.

ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂಬಂಧಿಕರನ್ನು ನೋಡಲು KA-53-C.1419 ನಂಬರ್‌ನ ಇಟಿಯೋಸ್ ಕಾರಿನಲ್ಲಿ ತೆರಳಿದ್ದ ಕುಟುಂಬ ಸದಸ್ಯರು ಹಿಂದಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ.

ಬೆಳಗಿನ ಜಾವ ನಿದ್ದೆ ಮಂಪರಿನಲ್ಲಿ ಕಾರು ಚಾಲಕನ ಅಜಾಗರೂಕತೆಯಿಂದ ರಸ್ತೆಯ ಡಿವೈಡರ್ ಗೆ ಡಿಕ್ಕಿ ಹೊಡೆದು ಪಕ್ಕದ ಲೇನ್ ಗೆ ಹಾರಿ ಕಂಟೇನರ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಾರು ನುಜ್ಜುಗುಜ್ಜಾಗಿದ್ದು ಒಳಗೆ ಸಿಲುಕಿರುವ ಮೃತದೇಹಗಳನ್ನು ಹೊರ ತೆಗೆಯಲು ಪೊಲೀಸರು ಹರಸಾಹಸಪಟ್ಟರು.

ಮೃತ ದೇಹಗಳನ್ನು ಹಾಸನದ ಹಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ಮರಣೋತ್ತರ ಪರೀಕ್ಷೆಗೆ ಸಾಗಿಸಲಾಗಿದೆ. ಹಾಸನ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next