Advertisement

ವಿಮಾನ ನಿಲ್ದಾಣ ನಿರ್ಮಾಣ; ದಶಕದ ವಿಘ್ನ ನಿವಾರಣೆ

03:04 PM Feb 06, 2021 | Team Udayavani |

ಹಾಸನ: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಅಸೆಯಂತೆ ಹಾಸನದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿ  ಪ್ರಾರಂಭಿಸುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಘೋಷಣೆ ಮಾಡುವ ಮೂಲಕ ದಶಕದ ವಿಘ್ನವನ್ನು ನಿವಾರಿಸಿದ್ದಾರೆ ಎಂದು ಶಾಸಕ ಪ್ರೀತಂಜೆ. ಗೌಡ ತಿಳಿಸಿದರು.

Advertisement

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಮಾನ ನಿಲ್ದಾಣಕ್ಕೆ ಹಾಸನದ ಬುವನ ಹಳ್ಳಿ ಬಳಿಯಲ್ಲಿ ಈಗಾಗಲೇ ಸ್ಥಳ   ಕಾದಿರಿಸಲಾಗಿದೆ. ಹಲವು ವರ್ಷಗಳಿಂದ ವಿಮಾನ ನಿಲ್ದಾಣ ಕಾಮಗಾರಿ ಆರಂಭವಾಗದೇ ಮಾಜಿ ಪ್ರಧಾನಿ ದೇವೇಗೌಡರ ಕನಸು ಕನಸಾಗಿಯೇ ಉಳಿದಿತ್ತು. ಈ ಬಗ್ಗೆ ಸರ್ಕಾರದ ಗಮನಕ್ಕೆ ತಂದು ಕಾಮಗಾರಿ ಮಾಡುವಂತೆ ಮನವಿ ಮಾಡಿದಾಗ ಹಲವು ಮಂದಿ ಇದನ್ನು ರಾಜಕೀಯವಾಗಿ ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಟೀಕಿಸಿದರು ಎಂದು ಹೇಳಿದರು.

ಹಿಂದೆ ಭರವಸೆ ನೀಡಿದ್ದೆ: ಮಾಜಿಪ್ರಧಾನಿ ದೇವೇಗೌಡರ ಆಸೆ ಈಡೇರಿಸುತ್ತೇನೆ ಎಂದು ಹಿಂದೆಯೇ ಹೇಳಿದ್ದೆ. ಅದರಂತೆ  ಜ.25ರಂದು ಮುಖ್ಯ ಮಂತ್ರಿ ಯಡಿಯೂರಪ್ಪನವರಿಗೆ ಸಲ್ಲಿಸಿದ್ದ ಮನವಿಗೆ ಪೂರಕವಾಗಿ ಮತ್ತು ನಿರಂತರ ಪ್ರಯತ್ನದಿಂದ ಶುಕ್ರವಾರ ವಿಧಾನಸಭೆಯ ಅಧಿವೇಶನದಲ್ಲಿ ಚರ್ಚೆಗೆ ಬಂದಿತ್ತು ಎಂದು ಹೇಳಿದರು.

ಬೇರೆ ಅರ್ಥ ಕೊಡುವುದು ಬೇಡ: ಅಧಿವೇಶನದಲ್ಲೇ ಕೂಡಲೇ ವಿಮಾನ ನಿಲ್ದಾಣ ನಿರ್ಮಾಣದ ಕಾಮಗಾರಿ ಕೈಗೆತ್ತಿಕೊಳ್ಳಲು  ಮುಖ್ಯಮಂತ್ರಿ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.ನಾನು ಜಿಲ್ಲೆಯ ಅಭಿವೃದ್ಧಿಗೆ ಹಾಗೂ ಜಿಲ್ಲೆಯ ಹಿರಿಯ  ರಾಜಕಾರಣಿಯೊಬ್ಬರು ಶಂಕುಸ್ಥಾಪನೆ ಮಾಡಿದ ಕಾಮಗಾರಿ ನಿಲ್ಲಬಾರದು ಎಂಬ ಉದ್ದೇಶ ನನ್ನಾಗಿದೆ. ಇದಕ್ಕೆ ಬೇರೆ ಅರ್ಥ ಕೊಡುವುದು ಬೇಡ ಎಂದು ಮನವಿ ಮಾಡಿದರು.

ಇದನ್ನೂ ಓದಿ :ಜಗದೀಶ್ ಅಧಿಕಾರಿ ಕ್ಷಮೆ ಯಾಚಿಸದಿದ್ದರೆ ಬಿಲ್ಲವರಾದ ನಾವು ‘ತಾಂಟಲು’ ಸಿದ್ದ: ಪ್ರತಿಭಾ ಕುಳಾಯಿ

Advertisement

ಉದ್ಯೋಗ ಅವಕಾಶ ಸಿಗಲಿದೆ: ಕಳೆದ 40 ವರ್ಷದಿಂದ ಪೂರ್ಣಗೊಳ್ಳದ ಹೊರವರ್ತುಲ ರಸ್ತೆ, ಒಳಚರಂಡಿ ಸೇರಿ ಈಗ ವಿಮಾನ  ನಿಲ್ದಾಣ ಕಾಮಗಾರಿಯನ್ನು ಬಿಜೆಪಿ ಸರಕಾರ ಬಂದ ಒಂದೂವರೆ ವರ್ಷದಲ್ಲೇ ಆರಂಭಿಸಿದ್ದಕ್ಕೆ ಜನಸಾಮಾನ್ಯರಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಈ ಹಿಂದಿನ ಸರ್ಕಾರ ಇದನ್ನು ಮಾಡಬೇಕಿತ್ತು ಅವರು ಮಾಡಲಿಲ್ಲ, ಹಾಗೆಂದು ನಾವು ಸುಮ್ಮನೆ ಕೂರುವುದಿಲ್ಲ, ವಿಮಾನ ನಿಲ್ದಾಣ ಪ್ರಾರಂಭವಾದರೆ, ಜಿಲ್ಲೆಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಹೆಸರು ಬರುವುದರೊಂದಿಗೆ ಅನೇಕ ಕಾರ್ಖಾನೆಗಳು ಜಿಲ್ಲೆಯಲ್ಲಿ ಸ್ಥಾಪನೆ ಆಗಲಿವೆ. ಇದರಿಂದ ಯುವಕರಿಗೆ ಉದ್ಯೋಗ ಅವಕಾಶ ದೊರೆಯುತ್ತದೆ ಎಂಬ ಆಶಾಭಾವನೆ ವ್ಯಕ್ತಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next