Advertisement

ಕಾಂಗ್ರೆಸ್‌ ಸೇರಿದ ಹಾಸನ ಬಿಜೆಪಿ ಜಿಲ್ಲಾಧ್ಯಕ್ಷ

11:48 AM Mar 29, 2019 | Team Udayavani |

ಬೆಂಗಳೂರು: ಬಿಜೆಪಿಯಿಂದ ಲೋಕಸಭೆ ಟಿಕೆಟ್‌ ಆಕಾಂಕ್ಷಿಯಾಗಿದ್ದ ಹಾಸನ ಜಿಲ್ಲಾಧ್ಯಕ್ಷ ಯೋಗಾ ರಮೇಶ್‌ ಅವರು ಗುರುವಾರ ಅಧಿಕೃತವಾಗಿ ಕಾಂಗ್ರೆಸ್‌ ಸೇರ್ಪಡೆಗೊಂಡರು. ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಪಕ್ಷದ ಧ್ವಜ ನೀಡಿ ಯೋಗಾ ರಮೇಶ್‌ ಅವರನ್ನು ಸ್ವಾಗತಿಸಿದರು.

Advertisement

ಈ ಸಂದರ್ಭದಲ್ಲಿ ಮಾತನಾಡಿದ ಸಿದ್ದರಾಮಯ್ಯ, ದೇಶದಲ್ಲಿ ಕೋಮುವಾದಿಗಳನ್ನು ಸೋಲಿಸಲು ರಾಜ್ಯದಲ್ಲಿ ಜೆಡಿಎಸ್‌ ಜತೆ ಮೈತ್ರಿ ಮಾಡಿಕೊಳ್ಳಲಾಗಿದೆ. ಹಾಸನದಲ್ಲಿ ನಮ್ಮ ಪಕ್ಷದಲ್ಲಿ ಇದ್ದವರೇ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಅವರು ಯಾಕೆ ಆ ಪಕ್ಷ ಸೇರಿದ್ದಾರೋ ನನಗೆ ಗೊತ್ತಿಲ್ಲ. ಅವರ ಬಗ್ಗೆ ನಾನು ಏನೂ ಮಾತನಾಡುವುದಿಲ್ಲ. ಬಿಜೆಪಿಯನ್ನು ಸೋಲಿಸುವುದಷ್ಟೇ ನಮ್ಮ ಗುರಿ ಎಂದು ಹೇಳಿದರು.

ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಮಾತನಾಡಿ, ಮಾಜಿ ಸಚಿವ ಎ. ಮಂಜು ಕಾಂಗ್ರೆಸ್‌ನಲ್ಲಿ ಎಲ್ಲ ರೀತಿಯ ಅಧಿಕಾರ ಅನುಭವಿಸಿ ಬಿಜೆಪಿ ಸೇರ್ಪಡೆಯಾಗಿ ಅಭ್ಯರ್ಥಿಯಾಗಿದ್ದಾರೆ. ಚುನಾವಣೆ ಮುಗಿದ ನಂತರ ಅವರಿಗೆ ಬಿಜೆಪಿಯ ಬಣ್ಣ ಗೊತ್ತಾಗಿ ವಾಪಸ್‌ ಕಾಂಗ್ರೆಸ್‌ಗೆ ಬರುತ್ತಾರೆ. ಆದರೆ, ಅವರಿಗೆ ಕಾಂಗ್ರೆಸ್‌ ಬಾಗಿಲು ಮುಚ್ಚಿದೆ ಎಂದು ಹೇಳಿದರು.

ಯೋಗಾ ರಮೇಶ್‌ ಮಾತನಾಡಿ, ಸರ್ಕಾರಿ ಹುದ್ದೆ ತೊರೆದು ಪ್ರೊ. ನಂಜುಂಡಸ್ವಾಮಿ ಅವರ ಪ್ರಭಾವದಿಂದ ರಾಜಕೀಯ ಸೇರ್ಪಡೆಗೊಂಡು ಹಾಸನ ಜಿಲ್ಲೆಯಲ್ಲಿ ಬಿಜೆಪಿಯನ್ನು ತಳ ಮಟ್ಟದಲ್ಲಿ ಬೆಳೆಸುವ ಪ್ರಯತ್ನ ಮಾಡಿದ್ದೆ. ಆದರೆ, ಪಕ್ಷದಲ್ಲಿ ಪ್ರಜಾಪ್ರಭುತ್ವಕ್ಕೆ ಬೆಲೆ ಇಲ್ಲದಿರುವುದರಿಂದ ಬೇಸತ್ತು ಕಾಂಗ್ರೆಸ್‌ ಸೇರಿದ್ದೇನೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next