Advertisement

ಪ್ರಾಕೃತಿಕ ಸವಾಲಿಗೆ ಜಿಲ್ಲಾಡಳಿತ ಕಾರ್ಯೋನ್ಮುಖ: ಡೀಸಿ

10:04 AM May 11, 2019 | Team Udayavani |

ಹಾಸನ: ಮುಂಬರುವ ಮುಂಗಾರಿನಲ್ಲಿ ಭಾರೀ ಮಳೆ ಹಾಗೂ ನೈಸರ್ಗಿಕ ವಿಕೋಪ ಸಂಭವಿಸಿದ್ದಲ್ಲಿ ಅದನ್ನು ನಿಭಾಯಿಸಲು ಜಿಲ್ಲಾಡಳಿತ ಮುಂಜಾ ಗ್ರತಾ ಕ್ರಮ ಕೈಗೊಳ್ಳುತ್ತಿದೆ ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್‌ ತಿಳಿಸಿದರು.

Advertisement

ಉನ್ನತ ಮಟ್ಟದ ಸಭೆಯ ನಂತರ ಸುದ್ದಿಗಾರ ರೊಂದಿಗೆ ಮಾತ ನಾಡಿದ ಅವರು, ಒಳಾಡಳಿತ ಇಲಾಖೆಯ ಸರ್ಕಾರದ ಅಪರ ಕಾರ್ಯದರ್ಶಿ, ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ, ಪ್ರಾದೇಶಿಕ ಆಯುಕ್ತರು, ಹಾಗೂ ಮೈಸೂರು ವಲಯದ ಐಜಿಪಿ ಜಂಟಿ ಸಭೆ ನಡೆಸಿ ಜಿಲ್ಲೆಯಲ್ಲಿ ಮುಂಗಾರು ಮಳೆ ಹಾಗೂ ನೈಸರ್ಗಿಕ ವಿಕೋಪ, ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಸಭೆ ನಡೆಸಿ ಹಲವು ಸಲಹೆ-ಸೂಚನೆ ಹಾಗೂ ನಿರ್ದೇಶನ ನೀಡಿದ್ದಾರೆ ಅವರ ಸಲಹೆಗಳನ್ನು ಜಿಲ್ಲಾಡಳಿತ ಅನುಸರಿಸಲಿದೆ ಎಂದರು.

ಸೂಚನೆ:ಅತಿವೃಷ್ಟಿ ನಿರ್ವಹಣೆಗಾಗಿ ಜಿಲ್ಲೆಗೆ 32.2 ಕೋಟಿ ರೂ., ಅನುದಾನ ಬಿಡುಗಡೆಯಾಗಿತ್ತು. ಅದನ್ನು ವಿವಿಧ ಇಲಾಖೆಗಳಿಗೆ ಬಿಡುಗಡೆ ಮಾಡ ಲಾಗಿದೆ. ಈಗಾಗಲೇ ಶೇ.75 ವೆಚ್ಚವಾಗಿದ. ಪ್ರತಿ ಇಲಾಖೆ ಕಾಮಗಾರಿಗಳನ್ನು ತ್ವರಿತವಾಗಿ ಮುಕ್ತಾಯ ಗೊಳಿಸಲು ಸೂಚಿಸಲಾಗಿದೆ ಎಂದರು.

ಸಮಸ್ಯಾತ್ಮಕವಾಗಬಹುದಾದ ಪ್ರದೇಶಗಳನ್ನು ಗುರುತಿಸಿ ಅಲ್ಲಿ ತಾತ್ಕಾಲಿಕ ಆಶ್ರಯ ಕೇಂದ್ರಗಳ ಸ್ಥಾಪನೆಗೆ ಪೂರ್ವ ಯೋಜನೆ ರೂಪಿಸಲಾಗಿದೆ. ಹೋಬಳಿ ಹಾಗೂ ತಾಲೂಕು ಮಟ್ಟದ ಅಧಿಕಾರಿ ಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ಎಲ್ಲಾ ತಾಲೂಕುಗಳಲ್ಲಿಯೂ ಕಂಟ್ರೋಲ್ ರೂಂಗಳ ಸ್ಥಾಪನೆಯಾಗಿದ್ದು ದಿನದ 24 ಗಂಟೆ ಕಾರ್ಯಪ್ರವೃತ್ತಿ ಯಲ್ಲಿರುತ್ತವೆ ಎಂದು ತಿಳಿಸಿದರು.

ಪ್ರವಾಹ, ಭೂ ಕುಸಿತ ಮತ್ತಿತರ ಅಪಾಯದ ಸಂದರ್ಭ ಬಳಸಲು ಬೇಕಾಗುವ ಸಾಧನ ಸಲಕರಣೆ ಸಂಗ್ರಹಿಸಲಾಗುತ್ತಿದೆ. ಯಂತ್ರೋಪಕರಣ ಈಜು ಗಾರರು, ವೈದ್ಯಕೀಯ ಸೌಲಭ್ಯಗಳ ಬಗ್ಗೆಯೂ ಪಟ್ಟಿ ಮಾಡಿಕೊಳ್ಳಲಾಗಿದೆ. ಔಷಧಿ ದಾಸ್ತಾನಿಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಗಳಿಗೆ ಸೂಚನೆ ನೀಡಲಾಗಿದೆ ಎಂದರು. ಅಪರ ಡೀಸಿ ಎಂ.ಎಲ್.ವೈಶಾಲಿ, ಉಪವಿಭಾಗಾಧಿಕಾರಿ ಎಚ್.ಎಲ್.ನಾಗರಾಜು ಇದ್ದರು.

ಗ್ರಾಮಲೆಕ್ಕಿಗರು ಕೇಂದ್ರ ಸ್ಥಾನದಲ್ಲೇ ಇರಲಿ
ಗ್ರಾಮ ಲೆಕ್ಕಿಗರು ಕಡ್ಡಾಯವಾಗಿ ಕೇಂದ್ರಸ್ಥಾನ ದಲ್ಲಿ ವಾಸವಿದ್ದು, ಸಾರ್ವಜನಿಕರು, ಸರ್ಕಾರಿ ಕೆಲಸ ಕಾರ್ಯಗಳನ್ನು ನಿಗದಿತ ಅವಧಿಯೊಳಗೆ ಮಾಡಿಕೊಡಬೇಕೆಂದು ಈ ಹಿಂದೆ ಸೂಚನೆ ನೀಡಲಾಗಿತ್ತು. ಆದರೂ ಗ್ರಾಮ ಲೆಕ್ಕಿಗರು ಕೇಂದ್ರ ಸ್ಥಾನದಲ್ಲಿ ವಾಸವಿಲ್ಲದಿರುವುದು ಕಂಡು ಬಂದಿದೆ. ಈಗ ಬರ ಪರಿಸ್ಥಿತಿ ಇರುವುದರಿಂದ ಕುಡಿವ ನೀರಿನ ಸಮಸ್ಯೆಯಿದ್ದು, ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಜಿಲ್ಲಾಧಿಕಾರಿಗಳ ಕಚೇರಿಗೆ ಬಂದು ತಿಳಿಸುತ್ತಿದ್ದಾರೆ. ಬರಪರಿಸ್ಥಿತಿ ಹಿನ್ನೆಲೆ ಯಲ್ಲಿ ಸರ್ಕಾರಿ ರಜೆ ದಿನಗಳಲ್ಲಿಯೂ ಗ್ರಾಮ ಲೆಕ್ಕಿಗರು, ಪಿಡಿಒಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿ ವಾಸವಿದ್ದು ಎಲ್ಲಾ ರೀತಿಯ ಸಮಸ್ಯೆ ಗಳ ಬಗ್ಗೆ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳ ಬೇಕು. ಅಲ್ಲದೇ, ಸಂಬಂಧಿಸಿದ ತಹಶೀಲ್ದಾರ್‌ ಹಾಗೂ ಕಾರ್ಯನಿರ್ವಹಣಾಧಿಕಾರಿಗೆ ವರದಿ ಸಲ್ಲಿಸಬೇಕು. ಇಲ್ಲದಿದ್ದರೆ ಯಾವುದೇ ಮುನ್ಸೂಚನೆ ನೀಡದೇ ಕರ್ನಾಟಕ ನಾಗರೀಕ ಸೇವಾ ನಿಯಮಾವಳಿಗಳ ಪ್ರಕಾರ ಶಿಸ್ತು ಕ್ರಮ ಜರುಗಿಸಲಾಗುವುದು. ಅಲ್ಲದೇ, ತುರ್ತು ಪರಿಸ್ಥಿತಿಗಳಲ್ಲಿ ಕಡ್ಡಾಯವಾಗಿ ಜಿಲ್ಲಾಧಿಕಾರಿಗಳ ಅನುಮತಿ ಪಡೆದು ಕೇಂದ್ರ ಸ್ಥಾನ ಬಿಡಬೇಕೆಂದೂ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್‌ ಸೂಚಿಸಿದ್ದಾರೆ.
Advertisement
Advertisement

Udayavani is now on Telegram. Click here to join our channel and stay updated with the latest news.

Next