ಸಿಂಧೂರಿ ದಾಸರಿ ಅವರನ್ನು ವರ್ಗಾವಣೆ ಮಾಡಿರುವ ಸರ್ಕಾರದ ಕ್ರಮ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
Advertisement
ಫೆಬ್ರವರಿ 7ರಿಂದ 26ರವರೆಗೆ ಶ್ರವಣ ಬೆಳಗೊಳದ ಗೋಮಟೇಶ್ವರ ಸ್ವಾಮಿಗೆ ಮಹಾಮಸ್ತಕಾಭಿಷೇಕ ನಡೆಯಲಿದ್ದು,ಅಂತಿಮ ಹಂತದ ಸಿದ್ಧತೆ ಭರದಿಂದ ಸಾಗುತ್ತಿದೆ. ಈ ಹಂತದಲ್ಲಿ ರೋಹಿಣಿ ಸಿಂಧೂರಿ ಅವರನ್ನು ಜಿಲ್ಲಾಧಿಕಾರಿ ಹುದ್ದೆಯಿಂದ ವರ್ಗಾವಣೆ ಮಾಡಿ ಡಾ. ಎಂ.ವಿ.ವೆಂಕಟೇಶ್ ಅವರನ್ನು ನೇಮಕ ಮಾಡಿರುವುದು ಚರ್ಚೆಗೆ ಕಾರಣವಾಗಿದೆ.
ನಡೆಯುತ್ತಿದೆ. ಶ್ರವಣಬೆಳಗೊಳ ಹೊರವಲಯದಲ್ಲಿ ಉಪ ನಗರಗಳ ನಿರ್ಮಾಣ ಕಾಮಗಾರಿಯೂ ಶುರುವಾಗಿದೆ.
ಗೋಮಟೇಶ್ವರ ವಿಗ್ರಹಕ್ಕೆ ಅಟ್ಟಣಿಗೆ ನಿರ್ಮಾಣ ಕಾಮಗಾರಿ ಕೊನೆಯ ಹಂತದಲ್ಲಿದೆ. ಜಿಲ್ಲಾಧಿಕಾರಿಗಳೇ ಖುದ್ದಾಗಿ
ಸಿದಟಛಿತಾ ಕಾರ್ಯಗಳ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ. ಕಳೆದ ಹಲವು ತಿಂಗಳುಗಳಿಂದ ರೋಹಿಣಿ ಸಿಂಧೂರಿ ಈ ಎಲ್ಲಾ ಕಾಮಗಾರಿಗಳ ಮೇಲುಸ್ತುವಾರಿ ವಹಿಸಿಕೊಂಡಿದ್ದು, ಇದೀಗ ಸಿದಟಛಿತೆ ಅಂತಿಮ ಹಂತದಲ್ಲಿದ್ದಾಗ ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡಿ ಹೊಸ ಜಿಲ್ಲಾಧಿಕಾರಿ ನೇಮಕ ಮಾಡಿರುವ ಸರ್ಕಾರದ ಕ್ರಮಕ್ಕೆ ಅಚ್ಚರಿ ವ್ಯಕ್ತವಾಗಿದೆ. ಇತ್ತೀಚೆಗೆ ಸಿಎಂ ಹಾಸನ ಜಿಲ್ಲೆಗೆ ಭೇಟಿ ನೀಡಿದ್ದಾಗ ಸ್ಥಳೀಯ ಕಾಂಗ್ರೆಸ್ಸಿಗರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ
ವಿರುದ್ಧ ದೂರು ಸಲ್ಲಿಸಿದ್ದರು. ಜಿಲ್ಲಾಧಿಕಾರಿಗಳು ಜೆಡಿಎಸ್ ಪರ ಪಕ್ಷಪಾತ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು.
ಇದರ ಬೆನ್ನಲ್ಲೇ ಅವರನ್ನು ಜಿಲ್ಲಾಧಿಕಾರಿ ಸ್ಥಾನದಿಂದ ಎತ್ತಂಗಡಿ ಮಾಡಲಾಗಿದೆ.