Advertisement

Hassan: ಇಂದಿನಿಂದ ಹಾಸನಾಂಬ ಜಾತ್ರೆ

11:29 PM Nov 01, 2023 | Team Udayavani |

ಹಾಸನ: ವರ್ಷಕ್ಕೊಮ್ಮೆ ಭಕ್ತರಿಗೆ ದರ್ಶನ ನೀಡುವ ಜಿಲ್ಲೆಯ ಅಧಿದೇವತೆ ಹಾಸನಾಂಬೆಯ ದರ್ಶನೋತ್ಸವಕೆ ಕ್ಷಣಗಣನೆ ಆರಂಭವಾಗಿದ್ದು, ಆಶ್ವಿ‌ಜ ಮಾಸದ ಮೊದಲ ಗುರುವಾರ ಮಧ್ಯಾಹ್ನ 12 ಗಂಟೆ ಶಾಸ್ತ್ರೋಕ್ತವಾಗಿ ದೇವಿಯ ಗರ್ಭಗುಡಿ ಬಾಗಿಲು ತೆರೆಯಲಿದೆ. ನ.15 ರವರೆಗೂ ನಡೆಯಲಿರುವ ಜಾತ್ರೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.

Advertisement

24 ಗಂಟೆಯೂ ದೇವಿ ದರ್ಶನ
ನ.3ರಿಂದ 14ರ ವರೆಗೆ ದೇವಿಗೆ ನೈವೇದ್ಯ ಅರ್ಪಣೆ ಸಮಯ ಹೊರತುಪಡಿಸಿ ದಿನದ 24 ಗಂಟೆಯೂ ದರ್ಶನದ ವ್ಯವಸ್ಥೆ ಮಾಡಲಾಗಿದೆ. ವಿವಿಐಪಿ, ವಿಐಪಿ ಮತ್ತು ವಿಶೇಷ ದರ್ಶನದ 1000 ರೂ. ಮತ್ತು 300 ರೂ. ಟಿಕೆಟ್‌ಗಳ ದುರ್ಬಳಕೆ ತಡೆಯುವ ನಿಟ್ಟಿನಲ್ಲಿ ಪಾಸ್‌ ಮತ್ತು ಟಿಕೆಟ್‌ಗಳ ಸ್ಕ್ಯಾನ್‌ ಮಾಡುವ ವ್ಯವಸ್ಥೆಯನ್ನು ಇದೇ ಮೊದಲ ಬಾರಿಗೆ ಜಿಲ್ಲಾಡಳಿತವು ಜಾರಿ ಮಾಡುತ್ತಿದೆ
14 ದಿನ 24 ಗಂಟೆಯೂ ದರ್ಶನ ಇರುವುದರಿಂದ ಮೂರು ಪಾಳಿಯಲ್ಲಿ ಭದ್ರತೆ ಮಾಡಲಾಗಿದೆ. ವಿಶೇಷವಾಗಿ ಕೆಎಸ್‌ಆರ್‌ಪಿ, ಡಿಎಆರ್‌ ಸಹಿತ ಮೀಸಲು ಪಡೆಗಳನ್ನೂ ಬಳಸಿಕೊಳ್ಳಲಾಗುವುದು ಎಂದು ಎಸ್ಪಿ ಮೊಹಮ್ಮದ್‌ ಸುಜೀತಾ ತಿಳಿಸಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next