Advertisement

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

12:35 AM Apr 30, 2024 | Team Udayavani |

ಬೆಂಗಳೂರು: ಹಾಸನ ಪ್ರಕರಣದ ವಿರುದ್ಧ ಪ್ರತಿಭಟನೆ ನಡೆಸುವ ಭರದಲ್ಲಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಗೌರವಕ್ಕೆ ಧಕ್ಕೆ ಉಂಟು ಮಾಡಿರುವ ಕಾಂಗ್ರೆಸ್‌ ಕಾರ್ಯಕರ್ತರನ್ನು ಬಂಧಿಸಿ ಕ್ರಮ ಜರಗಿಸಬೇಕು ಎಂದು ಪೊಲೀಸ್‌ ಆಯುಕ್ತರಿಗೆ ಜೆಡಿಎಸ್‌ ದೂರು ನೀಡಿದೆ.

Advertisement

ವಿಧಾನ ಪರಿಷತ್‌ ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ, ವಿಧಾನ ಪರಿಷತ್‌ ಮಾಜಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ, ಚೌಡರೆಡ್ಡಿ ತೂಪಲ್ಲಿ ನೇತೃತ್ವದ ನಿಯೋಗ ಪೊಲೀಸ್‌ ಆಯುಕ್ತ ದಯಾನಂದ್‌ ಅವರಿಗೆ ದೂರು ಸಲ್ಲಿಸಿತು.

ಹಾಸನ ಜಿಲ್ಲೆಯಲ್ಲಿ ನಡೆದಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್‌ ಕಾರ್ಯಕರ್ತರು ಎನ್ನಲಾದ ಕೆಲವು ಪುರುಷ, ಮಹಿಳೆಯರು ಬೆಂಗಳೂರಿನಲ್ಲಿ ರವಿವಾರ ರೇಸ್‌ ಕೋರ್ಸ್‌ ರಸ್ತೆಯಲ್ಲಿರುವ ಕಾಂಗ್ರೆಸ್‌ ಭವನದ ಬಳಿ ಪ್ರತಿಭಟನೆ ನಡೆಸಿದ್ದಾರೆ. ಇದರಲ್ಲಿ ಪಾಲ್ಗೊಂಡಿದ್ದ ಪುರುಷರು, ಮಹಿಳೆಯರು ಜನತಾದಳ (ಜಾತ್ಯತೀತ) ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಮಾಜಿ ಪ್ರಧಾನಮಂತ್ರಿಗಳೂ ಆಗಿರುವ ಎಚ್‌.ಡಿ.ದೇವೇಗೌಡ ಹಾಗೂ ಕರ್ನಾಟಕ ಪ್ರದೇಶ ಜನತಾದಳ ಅಧ್ಯಕ್ಷರೂ, ಮಾಜಿ ಮುಖ್ಯಮಂತ್ರಿಗಳೂ ಆದ ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ಪ್ರತಿಭಟನೆ ಮಾಡುವ ಭರದಲ್ಲಿ ಅತ್ಯಂತ ಅಪಮಾನಕರವಾಗಿ, ಕೀಳಾಗಿ ವರ್ತಿಸಿರುತ್ತಾರೆ. ನಮ್ಮ ಪಕ್ಷದ ಇಬ್ಬರು ಗೌರವಾನ್ವಿತ ನಾಯಕರಿಗೆ ಅಪಮಾನ ಮಾಡಿದ್ದಾರೆ. ಅವರ ಗೌರವಕ್ಕೆ ಧಕ್ಕೆ ಉಂಟು ಮಾಡಿದ್ದಾರೆ. ಮುಖಕ್ಕೆ ನಾಯಕರಿಬ್ಬರ ಮುಖವಾಡ ಧರಿಸಿ ಚಾರಿತ್ರ್ಯಕ್ಕೆ ಅಪಚಾರ ಎಸಗಿರುತ್ತಾರೆ ಎಂದು ದೂರಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next