Advertisement

Hassan Pen Drive Case; ಹೊಸ ನಿರೀಕ್ಷಣ ಜಾಮೀನು ಅರ್ಜಿ ಸಲ್ಲಿಸಿದ ರೇವಣ್ಣ

11:19 PM May 03, 2024 | Team Udayavani |

ಬೆಂಗಳೂರು: ಹಾಸನ ಪೆನ್‌ಡ್ರೈವ್‌ ಪ್ರಕರಣ ಸಂಚ ಲನ ಮೂಡಿಸಿರುವ ಬೆನ್ನಲ್ಲೇ ಮೈಸೂರಿನಲ್ಲಿ ದಾಖಲಾದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಎಚ್‌.ಡಿ. ರೇವಣ್ಣ ನಿರೀಕ್ಷಣ ಜಾಮೀನಿಗಾಗಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾ ಲಯದ ಮೊರೆ ಹೋಗಿದ್ದಾರೆ.

Advertisement

ಎಸ್‌ಐಟಿ ಪರ ಅಭಿಯೋಜಕರಿಗೆ (ಎಸ್‌ಪಿಪಿ) ನೋಟಿಸ್‌ ಜಾರಿ ಮಾಡಿದ ನ್ಯಾಯಾಲಯವು ವಿಚಾರಣೆಯನ್ನು ಶನಿವಾರಕ್ಕೆ ಮುಂದೂಡಿದೆ. ಮೈಸೂರಿನ ಕೆ.ಆರ್‌.ನಗರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ರೇವಣ್ಣ ಅವರಿಗೆ ಬಂಧನದ ಭೀತಿ ಎದುರಾಗಿದೆ.

ಹೀಗಾಗಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ನಿರೀಕ್ಷಣ ಜಾಮೀನಿಗಾಗಿ ಶುಕ್ರವಾರ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್‌ ಗಜಾನನ ಭಟ್‌ ಅವರು ಮುಂದಿನ ವಿಚಾರಣೆಯನ್ನು ಶನಿವಾರಕ್ಕೆ ಮುಂದೂಡಿ ಆದೇಶಿಸಿದ್ದಾರೆ.

ಕೆ.ಆರ್‌.ನಗರ ಪೊಲೀಸ್‌ ಠಾಣೆಯಲ್ಲಿ ದಾಖಲಾದ ಎಫ್ಐಆರ್‌ ಅನ್ನು ರೇವಣ್ಣ ಪರ ವಕೀಲರು ಓದಿದರು. ಈ ಎಫ್ಐಆರ್‌ನಲ್ಲಿ ಜಾಮೀನು ರಹಿತ ಸೆಕ್ಷನ್‌ಗಳಿವೆ. 364 ಅ, ಅಪಹರಣ, 364 ಅಕ್ರಮ ಬಂಧನ ಜಾಮೀನು ರಹಿತ ವಾಗಿವೆ. ನಾಪತ್ತೆಯಾಗಿರುವ ಮಹಿಳೆಯ ಹೆಸರನ್ನು ದೂರಿನಲ್ಲಿ ಉಲ್ಲೇಖಿಸಿರುವುದು ಕಂಡು ಬಂದಿಲ್ಲ ಎಂದು ವಾದಿಸಿದರು. ಲೈಂಗಿಕ ಕಿರುಕುಳ ಆರೋಪದ ಪ್ರಕರಣದಲ್ಲಿ ಶನಿವಾರ ವಿಚಾರಣೆಗೆ ಹಾಜರಾಗಲು ತಮ್ಮ ಅರ್ಜಿ
ದಾರರು ತಯಾರಿದ್ದಾರೆ. ಹೀಗಾಗಿ ಮಧ್ಯಾಂತರ ನಿರೀಕ್ಷಣ ಜಾಮೀನು ಮಂಜೂರು ಮಾಡು ವಂತೆ ಮನವಿ ಮಾಡಿದರು.

ಮತ್ತೊಂದು ಕೇಸ್‌ ಅರ್ಜಿ ಹಿಂಪಡೆದ ರೇವಣ್ಣ
ಲೈಂಗಿಕ ಕಿರುಕುಳ ಆರೋಪ ಕುರಿತು ಹೊಳೆನರಸೀಪುರ ಠಾಣೆಯಲ್ಲಿ ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಬಂಧಿಸಬಹುದು ಎಂಬ ಆತಂಕದಿಂದ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದ್ದ ನಿರೀಕ್ಷಣ ಜಾಮೀನು ಅರ್ಜಿಯನ್ನು ರೇವಣ್ಣ ಹಿಂಪಡೆದಿದ್ದಾರೆ. ಗುರುವಾರ ಸಲ್ಲಿಸಿದ್ದ ಅರ್ಜಿಯನ್ನು ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶುಕ್ರವಾರ ವಿಚಾರಣೆ ನಡೆಸಿತು. ವಿಚಾರಣೆಗೆ ಹಾಜರಾಗುವಂತೆ ರೇವಣ್ಣರಿಗೆ ನೋಟಿಸ್‌ ನೀಡಲಾಗಿದೆ. ಈ ನೋಟಿಸ್‌ನಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಲ್ಲ ಆರೋಪಗಳು ಜಾಮೀನು ರಹಿತವಲ್ಲ ದ್ದಾಗಿದೆ. ದೂರಿನಲ್ಲಿ ರೇವಣ್ಣ ವಿರುದ್ಧ ಅತ್ಯಾಚಾರ ಆರೋಪ ಸೇರ್ಪಡೆಯಾಗಿಲ್ಲ. ಹೀಗಾಗಿ ಅರ್ಜಿದಾರರನ್ನು ಬಂಧಿಸುವ ಅಗತ್ಯ ಇಲ್ಲ. ಆದ್ದರಿಂದ ನಿರೀಕ್ಷಣ ಜಾಮೀನು ಪಡೆದುಕೊಳ್ಳುವ ಅಗತ್ಯವಿಲ್ಲ ಎಂದು ವಿಚಾರಣೆ ವೇಳೆ ಎಸ್‌ಐಟಿ ಪರ ಅಭಿಯೋಜಕ ಬಿ.ಎನ್‌.ಜಗದೀಶ್‌ ಹೇಳಿದರು. ಈ ಬೆಳವಣಿಗೆ ಬೆನ್ನಲ್ಲೇ ರೇವಣ್ಣ ಪರ ವಕೀಲರು, ಅರ್ಜಿ ಹಿಂಪಡೆಯುವುದಾಗಿ ನ್ಯಾಯಾಲಯದ ಗಮನಕ್ಕೆ ತಂದರು.

Advertisement

ಭವಾನಿ ರೇವಣ್ಣಗೂ ಬುಲಾವ್‌
ಮೈಸೂರಿನಲ್ಲಿ ದಾಖಲಾದ ಅಪಹರಣ ಪ್ರಕರಣದಲ್ಲಿ ರೇವಣ್ಣ ಪತ್ನಿ ಭವಾನಿ ರೇವಣ್ಣ ಅವರಿಗೂ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ಬುಲಾವ್‌ ನೀಡಿದೆ. ಈ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರ ಹೆಸರು ಥಳುಕು ಹಾಕಿಕೊಂಡಿರುವ ಹಿನ್ನೆಲೆಯಲ್ಲಿ ಅವರಿಂದ ಪ್ರಕರಣದ ಮಾಹಿತಿ ಪಡೆಯಲು ಎಸ್‌ಐಟಿ ನೋಟಿಸ್‌ ನೀಡಿದೆ ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next