Advertisement

Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್‌ ರೇವಣ್ಣ ಪ್ರಚಾರಕ್ಕೆ ಚಾಲನೆ

08:09 PM Mar 22, 2024 | Team Udayavani |

ಹೊಳೆನರಸೀಪುರ (ಹಾಸನ): ತಾಲೂಕಿನ ಮೂಡಲಹಿಪ್ಪೆ ಗ್ರಾಮದ ಚೆನ್ನಿಗರಾಯ ಸ್ವಾಮಿಗೆ ಪೂಜೆ ಸಲ್ಲಿಸುವ ಮೂಲಕ ಶುಕ್ರವಾರ ಮೈತ್ರಿ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಪರವಾಗಿ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಕುಟುಂಬಸ್ಥರು ಲೋಕಸಭಾ ಚುನಾವಣ ಪ್ರಚಾರಕ್ಕೆ ಚಾಲನೆ ನೀಡಿದರು.

Advertisement

ಈ ವೇಳೆ ಮಾತನಾಡಿದ ಎಚ್‌.ಡಿ.ರೇವಣ್ಣ, ಎ.26ರಂದು ನಡೆಯಲಿರುವ ಚುನಾವಣೆಯನ್ನು ಒಟ್ಟಾಗಿ ಎದುರಿಸೋಣ. ಸಣ್ಣಪುಟ್ಟ ಭಿನ್ನಾಭಿಪ್ರಾಯಗಳಿದ್ದರೆ ಅವುಗಳೆಲ್ಲವನ್ನೂ ಮರೆತು ಪಕ್ಷಕ್ಕಾಗಿ ದುಡಿಯೋಣ. ಮೋದಿ ಅವರನ್ನು ಪ್ರಧಾನಿ ಮಾಡಲು ಶ್ರಮಿಸೋಣ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು. ಸಂಭಾವ್ಯ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ, ಅವರ ತಾಯಿ ಭವಾನಿ ರೇವಣ್ಣ ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

 

 

Advertisement

Udayavani is now on Telegram. Click here to join our channel and stay updated with the latest news.

Next