Advertisement

Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ

10:35 PM Dec 12, 2024 | Team Udayavani |

ಆಲೂರು : ಸಾಲಬಾಧೆಯಿಂದ ಪತಿ-ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಪಾಳ್ಯ ಹೋಬಳಿ ಕಟ್ಟೆಗದ್ದೆ ಗ್ರಾಮದಲ್ಲಿ ನಡೆದಿದೆ.

Advertisement

ಗ್ರಾಮದ ನಟೇಶ್ (55),ಚಿನ್ನಮ್ಮ (44) ಆತ್ಮಹತ್ಯೆ ಮಾಡಿಕೊಂಡಿರುವ ದಂಪತಿ ಇಬ್ಬರೂ ಬುಧವಾರ ತಡರಾತ್ರಿ ತಮ್ಮ ಜಮೀನಿನ ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಅವರಿಗೆ ಒಬ್ಬ ಪುತ್ರ ಹಾಗೂ ಪುತ್ರಿ ಇದ್ದು,  ಪುತ್ರಿಯ ಎರಡು ವರ್ಷದ ಹಿಂದೆ ಮದುವೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ದಂಪತಿ ಆತ್ಮಹತ್ಯೆಯ ಸಂದರ್ಭದಲ್ಲಿ ಪುತ್ರ ಮನೆಯಲ್ಲಿರಲಿಲ್ಲ ಎಂದು ತಿಳಿದು ಬಂದಿದೆ. ಗುರುವಾರ ಬೆಳಿಗ್ಗೆ ಗ್ರಾಮಸ್ಥರು ಜಮೀನಿಗೆ ಕೆಲಸಕ್ಕೆ ಹೋಗುವ ವೇಳೆ  ಗ್ರಾಮಸ್ಥರು ಗಮನಿಸಿ ಮಾಹಿತಿ ನೀಡಿದ್ದಾರೆ. ಕಳೆದ ವರ್ಷ ಬೆಳೆ ಬೆಳೆಯುವ ಸಲುವಾಗಿ ವಿವಿಧ ಬ್ಯಾಂಕ್ ಹಾಗೂ ಕೈ ಸಾಲ ಮಾಡಿಕೊಂಡಿದ್ದರು ಎಂದು ಹೇಳಲಾಗುತ್ತಿದೆ ಸಾಲದ ಹೊರೆ ಹೆಚ್ಚಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪುತ್ರ ಪುನೀತ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ರೈತರ ನೆರವಿಗೆ ಧಾವಿಸಿ ಶಾಸಕ ಸಿಮೆಂಟ್ ಮಂಜು ಒತ್ತಾಯ :
ಆಲೂರು-ಸಕಲೇಶಪುರ ಕ್ಷೇತ್ರದಲ್ಲಿ ಒಂದೆಡೆ ಕಾಡಾನೆ ಉಪಟಳದಿಂದ ಬೇಸತ್ತಿದ್ದು, ಇನ್ನೊಂದೆಡೆ ಹವಾಮಾನ ವೈಪರೀತ್ಯದಿಂದ ಬೆಳೆ ಕೈ ಸೇರುತ್ತಿಲ್ಲ ರಾಜ್ಯ ಸರ್ಕಾರ ಗ್ಯಾರಂಟಿ ಹೆಸರಿನಲ್ಲಿ ಯಾವುದೇ ಅಭಿವೃದ್ಧಿ ಅಥವಾ ರೈತರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಆದ್ದರಿಂದ ರೈತರು ಆತ್ಮಹತ್ಯೆ ದಾರಿ ಹಿಡಿದಿದ್ದಾರೆ ಸರ್ಕಾರ ಕೂಡಲೇ ರೈತರ ನೆರವಿಗೆ ಧಾವಿಸಬೇಕು ಆಲೂರು ತಾಲೂಕಿನ ಪಟ್ಟೆಗದ್ದೆ ಗ್ರಾಮದ ರೈತ ನಟೇಶ್ ಹಾಗೂ ಪತ್ನಿ ಚಿನ್ನಮ್ಮ ಆತ್ಮಹತ್ಯೆ ಮಾಡಿಕೊಂಡಿರುವುದು ಅತೀವ ನೋವು ತಂದಿದೆ. ಸಾಲಕ್ಕಾಗಿ ಹೆದರಿ ಯಾವುದೇ ರೈತರು ಆತ್ಮಹತ್ಯೆಗೆ ಮುಂದಾಗಬಾರದು ಎಂದು ಮನವಿ ಮಾಡಿ ರೈತ ಕುಟುಂಬಕ್ಕೆ ಸಾಂತ್ವನ ಹೇಳಿದರು.

ರೈತ ಕುಟುಂಬಕ್ಕೆ ಪರಿಹಾರ ನೀಡಿ: 
ಕಟ್ಟೆಗದ್ದೆ ಗ್ರಾಮದ ನಟೇಶ್ ಹಾಗೂ ಚಿನ್ನಮ್ಮ ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದು ನೋವು ತಂದಿದೆ ಆತ್ಮಹತ್ಯೆ ಮಾಡಿರುವ ಮೃತ ಕುಟುಂಬಕ್ಕೆ ಸರ್ಕಾರ ಕೂಡಲೇ ಸಾಲ ಮನ್ನಾ ಜೊತೆಗೆ ತಲಾ 5 ಲಕ್ಷ ಪರಿಹಾರ ನೀಡಬೇಕು ಎಂದು ಸಮಾಜ ಸೇವಕ ಕಟ್ಟೆ ಗದ್ಯ ನಾಗರಾಜು ಸರ್ಕಾರವನ್ನು ಒತ್ತಾಯಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next