Advertisement

Hassan: 5ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

12:17 PM Nov 11, 2023 | Team Udayavani |

ಹಾಸನ: ಎಂಜಿನಿಯರಿಂಗ್‌ ಕಾಲೇಜಿನ ಕಟ್ಟಡದ 5ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ನಗರದ ರಾಜೀವ್‌ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಗುರುವಾರ ನಡೆದಿದೆ.

Advertisement

ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಇ. (ಎಲೆಕ್ಟ್ರಾನಿಕ್ಸ್‌ ಆ್ಯಂಡ್‌ ಕಮ್ಯುನಿಕೇಷನ್‌) ವಿದ್ಯಾರ್ಥಿನಿ ಚನ್ನರಾಯ ಪಟ್ಟಣ ತಾಲೂಕು ದಂಡಿಗನಹಳ್ಳಿ ಹೋಬಳಿ ಹೊನ್ನಶೆಟ್ಟಿಹಳ್ಳಿ ಗ್ರಾಮದ ಮಾನ್ಯ (19) ಆತ್ಮಹತ್ಯೆ ಮಾಡಿಕೊಂಡವರು. ಕಾಲೇಜಿನಲ್ಲಿ ಗುರುವಾರ ಮಧ್ಯಾಹ್ನ ಮೊದಲ ಸೆಮಿಸ್ಟರ್‌ ಪರೀಕ್ಷೆ ನಡೆಯುತ್ತಿತ್ತು. ಪರೀಕ್ಷೆಯಲ್ಲಿ ಮಾನ್ಯ ನಕಲು ಮಾಡುತ್ತಿದ್ದಾರೆಂದು ಉಪನ್ಯಾಸಕರು ಪ್ರಾಂಶುಪಾಲರ ಗಮನಕ್ಕೆ ತಂದಿದ್ದಾರೆ.

ಪ್ರಾಂಶುಪಾಲರು ತಮ್ಮ ಕೊಠಡಿಗೆ ಮಾನ್ಯಳನ್ನು ಕರೆಸಿ ಮಾತನಾಡಿದ್ದಾರೆ. ಬಳಿಕ ಕಾಲೇಜಿನ 5ನೇ ಮಹಡಿಗೆ ಹೋದ ಮಾನ್ಯ ಕೆಳಕ್ಕೆ ಜಿಗಿದಿದ್ದಾಳೆ. ಸಂಜೆ ವೇಳೆಗೆ ಯುವತಿಯ ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next