ಬೆಂಗಳೂರು: ಹಾಸನ ಟಿಕೆಟ್ ವಿಚಾರದಲ್ಲಿ ಜೆಡಿಎಸ್‌ನಲ್ಲಿ ಯಾವುದೇ ಗೊಂದಲವಿಲ್ಲ. ಒಂದು ವಾರದಲ್ಲಿ ಎಲ್ಲದಕ್ಕೂ ತೆರೆ ಬೀಳಲಿದೆ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ತಿಳಿಸಿದ್ದಾರೆ.
ಸೋಮವಾರ ದೇವೇಗೌಡರ ನಿವಾಸದಲ್ಲಿ ನಡೆದ ಸಭೆಯ ನಂತರ ಮಾತನಾಡಿದ ಅವರು, ಹಾಸನದಲ್ಲೂ ನಾವೇ ಗೆಲ್ಲುತ್ತೇವೆ, ರಾಜ್ಯದಲ್ಲೂ ನಮ್ಮದೇ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು.
ಹಾಸನ ಟಿಕೆಟ್ ವಿಚಾರದಲ್ಲಿ ದೇವೇಗೌಡರದೇ ಅಂತಿಮ ತೀರ್ಮಾನ. ಅದಕ್ಕೆ ಯಾವ ವಿರೋಧವೂ ಇಲ್ಲ. ಹಾಸನ ಜಿಲ್ಲೆಯಲ್ಲಿ 7 ಕ್ಕೆ 7 ಕ್ಷೇತ್ರ ಗೆಲ್ಲಲು ದೇವೇಗೌಡರು ಸೂಚನೆ ನೀಡಿದ್ದಾರೆ ಎಂದರು.
ಹಾಸನ ಜಿಲ್ಲೆಯ ವಿಧಾನಸಭೆ ಕ್ಷೇತ್ರಗಳ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಎಚ್.ಡಿ.ರೇವಣ್ಣ, ಸಂಸದ ಪ್ರಜ್ವಲ್ ರೇವಣ್ಣ ದೇವೇಗೌಡರನ್ನು ಭೇಟಿ ಮಾಡಿ ಚರ್ಚಿಸಿದರು.
Related Articles
ಎ.ಟಿ.ರಾಮಸ್ವಾಮಿ, ಶಿವಲಿಂಗೇಗೌಡ ಗೈರು ಹಾಜರಾಗಿದ್ದರು. ಹಾಸನಕ್ಕೆ ಸ್ವರೂಪ್ ಬದಲು ರಾಜೇಗೌಡ ಅವರಿಗೆ ಟಿಕೆಟ್ ಕೊಡಿಸಲು ಎಚ್.ಡಿ.ರೇವಣ್ಣ ಪ್ರಯತ್ನಿಸುತ್ತಿದ್ದಾರೆ. ಆದರೆ, ಸ್ಥಳೀಯವಾಗಿ ಸ್ವರೂಪ್‌ಗೆ ಟಿಕೆಟ್ ಕೊಡಬೇಕು ಎಂಬ ಬೇಡಿಕೆಯಿದೆ. ಕೆಲವು ಮುಖಂಡರು ಭವಾನಿ ರೇವಣ್ಣ ಅವರೇ ಸ್ಪರ್ಧೆ ಮಾಡುವುದು ಸೂಕ್ತ ಎಂದು ಆಗ್ರಹಿಸುತ್ತಿದ್ದಾರೆ.