Advertisement

ಅ.17ರಿಂದ ಹಾಸನಾಂಬೆ ಜಾತ್ರಾ ಮಹೋತ್ಸವ

10:51 PM Sep 18, 2019 | Lakshmi GovindaRaju |

ಹಾಸನ: ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆಯ ಜಾತ್ರಾ ಮಹೋತ್ಸವ ಅ. 17 ರಿಂದ 29 ರವರೆಗೆ ಒಟ್ಟು 13 ದಿನಗಳ ಕಾಲ ನಡೆಯಲಿದೆ. ಜಾತ್ರಾ ಮಹೋತ್ಸವ ಸಿದ್ಧತೆಯ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಆರ್‌.ಗಿರೀಶ್‌ ಅವರು, ಅ.17ರಂದು ಮಧ್ಯಾಹ್ನ 12.30ಕ್ಕೆ ಬಾಗಿಲು ತೆರೆಯಲಿದ್ದು, ಅ. 29ರಂದು ಮಧ್ಯಾಹ್ನ 12ಗಂಟೆ ನಂತರ ಬಾಗಿಲು ಮುಚ್ಚಲಾಗುವುದು ಎಂದು ಹೇಳಿದರು.

Advertisement

ಬಾಗಿಲು ತೆರೆಯುವ ಅ.17 ರಂದು ಹಾಗೂ ಬಾಗಿಲು ಮುಚ್ಚುವ 29 ರಂದು ಸಾರ್ವಜನಿಕರಿಗೆ ದೇವಿಯ ದರ್ಶನಕ್ಕೆ ಅವಕಾಶ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಅ. 18 ರಿಂದ ಪ್ರತಿದಿನ ದೇವಿಗೆ ನೈವೇದ್ಯ ಪೂಜಾ ಸಮಯ ಮಧ್ಯಾಹ್ನ 1ರಿಂದ 3 ಗಂಟೆಯವರೆಗೆ ಭಕ್ತರಿಗೆ ದರ್ಶನ ಇರುವುದಿಲ್ಲ. ಉಳಿದ ಅವಧಿಯಲ್ಲಿ ರಾತ್ರಿ11ಗಂಟೆಯವರೆಗೆ ದರ್ಶಕ್ಕೆ ಆವಕಾಶವಿರುತ್ತದೆ. ಅ.23, 25 ಮತ್ತು ಅ.27ರ ದಿನಾಂಕಗಳಂದು ರಾತ್ರಿ 11ರಿಂದ ಬೆಳಗ್ಗೆ 6 ಗಂಟೆಯವರೆಗೆ ದೇವಿಗೆ ವಿಶೇಷ ನೈವೇದ್ಯ ಮತ್ತು ಪೂಜೆ ಇರುತ್ತದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next